ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತ್ರಿವರ್ಣ ಧ್ವಜ
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ಕಳೆದಿವೆ. ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದಲ್ಲಿ ಒಮ್ಮೆಯೂ ಆಗಸ್ಟ್ 15ರಂದು ಧ್ವಜಾರೋಹಣ ಮಾಡಿರಲಿಲ್ಲ. ಆದ್ರೆ, ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಇಂದು ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು.
ಬೆಂಗಳೂರು, (ಆಗಸ್ಟ್.15): ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಇದೇ ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಾಡಿದೆ. ಸರ್ಕಾರದಿಂದಲೇ ಧ್ವಜಾರೋಹಣ ಮಾಡಿರುವುದು ವಿಶೇಷವಾಗಿದೆ.
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ: ಸಿಎಂ ಬಸವರಾಜ ಬೊಮ್ಮಾಯಿ ಭಾಷಣ
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳು ಕಳೆದಿವೆ. ಬೆಂಗಳೂರಿನ ವಿವಾದಿತ ಈದ್ಗಾ ಮೈದಾನದಲ್ಲಿ ಒಮ್ಮೆಯೂ ಆಗಸ್ಟ್ 15ರಂದು ಧ್ವಜಾರೋಹಣ ಮಾಡಿರಲಿಲ್ಲ. ಆದ್ರೆ, ಇದೇ ಮೊದಲ ಬಾರಿಗೆ ಈದ್ಗಾ ಮೈದಾನದಲ್ಲಿ ಇಂದು ತ್ರಿವರ್ಣ ಧ್ವಜವನ್ನು ಹಾರಿಸಲಾಯಿತು. ಈ ಹಿನ್ನೆಲೆಯಲ್ಲಿ ಕೆಲವರು ಪಟಾಖಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.