Flag Row: ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್ ಪಟ್ಟು, ಫೆ. 21 ರವರೆಗೆ ಧರಣಿ ನಡೆಸಲು ತೀರ್ಮಾನ

ಸಚಿವ ಈಶ್ವರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿತು.  ಈಶ್ವರಪ್ಪ ವಜಾಕ್ಕೆ ಪಟ್ಟು ಹಿಡಿದು ಉಭಯ ಸದನಗಳಲ್ಲಿ ಗದ್ದಲ ಸೃಷ್ಟಿಸಿದರು. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 19): ಸಚಿವ ಈಶ್ವರಪ್ಪ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ ನಡೆಸಿತು. ಈಶ್ವರಪ್ಪ ವಜಾಕ್ಕೆ ಪಟ್ಟು ಹಿಡಿದು ಉಭಯ ಸದನಗಳಲ್ಲಿ ಗದ್ದಲ ಸೃಷ್ಟಿಸಿದರು. ಕಾಂಗ್ರೆಸ್‌ ಧರಣಿ, ಘೋಷಣೆಗಳ ನಡುವೆಯೇ ಪ್ರಶ್ನೋತ್ತರ, ವಿಧೇಯಕ ಮಂಡನೆಯ ಮೂಲಕ ಕಲಾಪ ನಡೆಸಲು ಯತ್ನಿಸಿದರೂ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಸದನವನ್ನು ಮೊಟಕುಗೊಳಿಸಿ ಸೋಮವಾರಕ್ಕೆ ಮುಂದೂಡಲಾಯಿತು.

ರಾಷ್ಟ್ರಧ್ವಜ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆದುಕೊಳ್ಳುವುದಾಗಲಿ, ಕ್ಷಮೆ ಕೇಳಬೇಕಾದ ಅಗತ್ಯವಾಗಲಿ ಇಲ್ಲ ಎಂಬ ಸ್ಪಷ್ಟನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

Related Video