ಬಿಸಿಯೂಟ ಸೇವಿಸಿ 40 ಮಕ್ಕಳು ಅಸ್ವಸ್ಥ, ನಾಲ್ವರು ಗಂಭೀರ

ಬಿಸಿಯೂಟ ಸೇವಿಸಿ 40 ಮಕ್ಕಳು ಅಸ್ವಸ್ಥರಾಗಿದ್ದು,  ನಾಲ್ವರು ಗಂಭೀರವಾಗಿರುವ ಘಟನೆ ಚಿತ್ರದುರ್ಗದ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ

Share this Video
  • FB
  • Linkdin
  • Whatsapp

ಚಿತ್ರದುರ್ಗ (ಜುಲೈ 21): ಇಲ್ಲಿ ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದಲ್ಲಿ ಬಿಸಿಯೂಟವನ್ನು ಸೇವಿಸಿ 40ಕ್ಕೂ ಅಧಿಕ ಮಕ್ಕಳು ಅಸ್ವಸ್ಥರಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಅಸ್ವಸ್ಥರಾಗಿದ್ದು, ವಾಂತಿ, ಭೇದಿಯಿಂದ ಬಳಲುತ್ತಿದ್ದ ಮಕ್ಕಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಗಂಭೀರವಾಗಿರುವ ನಾಲ್ಕು ವಿದ್ಯಾರ್ಥಿಗಳನ್ನು ದಾವಣೆಗೆರೆಯ ಅಸ್ಪತ್ರೆಗೆ ಸಾಗಿಸಲಾಗಿದೆ. ಭರಮಸಾಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಹುತೇಕ ಎಲ್ಲಾ ಮಕ್ಕಳು ಚೇತರಿಕೆ ಕಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ವಾಂತಿ-ಭೇದಿ ಸಮಸ್ಯೆ ಆಗಿರುವ ಕಾರಣ ಇನ್ನೂ 24 ಗಂಟೆಗಳ ಕಾಲ ಇವರೆಲ್ಲ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಬಿರುಕು ಬಿಟ್ಟ ಸರ್ಕಾರಿ ಶಾಲೆ; ಮನೆಯಲ್ಲೇ ಶಿಕ್ಷಕರ ಪಾಠ!

Related Video