Asianet Suvarna News Asianet Suvarna News

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೋವಿಡ್‌19: ಗುರುವಾರ ಲಾಕ್‌ಡೌನ್ ಭವಿಷ್ಯ ನಿರ್ಧಾರ?

ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ಬೆಂಗಳೂರು (ಜೂ. 23): ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಪಕ್ಕಾ ವ್ಯಾಪಿಸಿದೆ. ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಲ್ಲಿ ಸೋಂಕು ಸಮುದಾಯಕ್ಕೂ ಹಬ್ಬುವ ಹಂತಕ್ಕೆ ಬಂದಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಶತಕ ಮೀರಿ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳಲ್ಲಿ ಅರ್ಧಕ್ಕೂ ಹೆಚ್ಚು ಜನರಿಗೆ ಸೋಂಕಿನ ಮೂಲವೇ ಪತ್ತೆಯಾಗಿಲ್ಲ. ರಾಜ್ಯದಲ್ಲೇ ಮತ್ತೊಮ್ಮೆ ಲಾಕ್‌ಡೌನ್ ಮಾಡಲಾಗುತ್ತಾ ಅಥವಾ ಬೆಂಗಳೂರನ್ನ ಮಾತ್ರ ಲಾಕ್‌ಡೌನ್ ಮಾಡಲಾಗುತ್ತಾ? ಎಂಬುದು ಗುರುವಾರ ನಿರ್ಧಾರವಾಗಲಿದೆ. ಲಾಕ್‌ಡೌನ್ ಬಗ್ಗೆ ಕ್ಯಾಬಿನೆಟ್‌ ಸಭೆಯಲ್ಲಿ ಮತ್ತೊಮ್ಮೆ ಪರಾಮರ್ಶಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. 

ಸೋಂಕಿತರಿಗೆ ಚಿಕಿತ್ಸೆಯೂ ಇಲ್ಲ, ಊಟವೂ ಇಲ್ಲ: ಕೋವಿಡ್ ಆಸ್ಪತ್ರೆ ಅವ್ಯವಸ್ಥೆ ಇದು.!

ರಾಜ್ಯದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಮಾಡಬೇಕೆಂದು ವಿರೋಧ ಪಕ್ಷದ ನಾಯಕರು, ಎಚ್‌ಡಿ ಕುಮಾರಸ್ವಾಮಿಯವರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹಾಗಾದರೆ ಮತ್ತೆ ಲಾಕ್‌ಡೌನ್ ಮಾಡಲು ಸರ್ಕಾರ ಮುಂದಾಗುತ್ತಾ? ಇಲ್ಲಿದೆ ಹೆಚ್ಚಿನ ಮಾಹಿತಿ. 

Video Top Stories