ಏರ್ ಶೋದಲ್ಲಿ ಕನ್ನಡ ಮಾಯ, ಜಾಲತಾಣಗಳಲ್ಲಿ ಕನ್ನಡಿಗರ ಆಕ್ರೋಶ
ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ವಿಶ್ವದ ಮೊದಲ ಹೈಬ್ರೀಡ್ ವೈಮಾನಿಕ ಪ್ರದರ್ಶನದಲ್ಲಿ ಕನ್ನಡ ಮಾಯವಾಗಿದೆ. ಇದಕ್ಕೆ ಎಚ್‌ಡಿಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.
ಬೆಂಗಳೂರು (ಫೆ. 04): ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ವಿಶ್ವದ ಮೊದಲ ಹೈಬ್ರೀಡ್ ವೈಮಾನಿಕ ಪ್ರದರ್ಶನದಲ್ಲಿ ಕನ್ನಡ ಮಾಯವಾಗಿದೆ. ಇದಕ್ಕೆ ಎಚ್‌ಡಿಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ.
'ಇತ್ತೀಚಿಗೆ ಭದ್ರಾವತಿಯಲ್ಲಿ ಅಮಿತ್ ಶಾ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದ್ಲಿ ಕನ್ನಡವನ್ನು ಕಡೆಗಣಿಸಲಾಗಿತ್ತು. ಇದೀಗ ಬೆಂಗಳೂರು ಏರ್ ಶೋದಲ್ಲಿ ಇಂಗ್ಲೀಷ್ ಹಾಗೂ ಹಿಂದಿ ಭಾಷೆಯ ಫಲಕ ಮಾತ್ರ ರಾರಾಜಿಸುತ್ತಿದೆ. ಇದು ಅತ್ಯಂತ ನೋವಿನ ಸಂಗತಿ' ಎಂದು ಎಚ್‌ಡಿಕೆ ಹೇಳಿದ್ಧಾರೆ.