ವಂಚನೆ ಆರೋಪದಲ್ಲಿ ಶ್ರೀರಾಮುಲು ಆಪ್ತ ಅರೆಸ್ಟ್: ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ

- ವಿಜಯೇಂದ್ರ ಹೆಸರು ಬಳಸಿಕೊಂಡು ಕೋಟ್ಯಂತರ ರೂ ವಂಚನೆ, ಶ್ರೀರಾಮುಲು ಪಿಎ ಬಂಧನ- ವಿಜಯೇಂದ್ರ ದೂರಿನ ಅನ್ವಯ ಬಂಧನ- ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ದೂರು

Share this Video
  • FB
  • Linkdin
  • Whatsapp

ಬೆಂಗಳೂರು (ಜು. 02): ತಮ್ಮ ಹೆಸರನ್ನು ಬಳಸಿಕೊಂಡು, ಜನರಿಂದ ಕೋಟ್ಯಂತರ ಹಣ ವಸೂಲಿ ಮಾಡಿ ವಂಚಿಸಿದ ಆರೋಪದ ಮೇರೆಗೆ ಶ್ರೀರಾಮುಲು ಪಿಎ ರಾಜಣ್ಣರನ್ನು ಬಂಧಿಸಲಾಗಿದೆ. ಈ ಬಗ್ಗೆ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. 

'ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ. ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು' ಎಂದಿದ್ದಾರೆ. 

Related Video