Asianet Suvarna News Asianet Suvarna News

ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

ಮೇ.30ರಂದು ಸುವರ್ಣ ನ್ಯೂಸ್ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎನ್ನುವುದರ ಬಗ್ಗೆ ವಿಸ್ತೃತವಾದ ತನಿಖಾ ವರದಿ ಮೂಲಕ ಗಮನ ಸೆಳೆದಿತ್ತು. ಈ ವರದಿಗೆ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬೆಂಗಳೂರು(ಜೂ.06): ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಂದ ದುಬಾರಿ ಹಣ ವಸೂಲಿ ಮಾಡುವ ಬಗ್ಗೆ ಸುವರ್ಣ ನ್ಯೂಸ್ ಸ್ಟಿಂಗ್ ಆಪರೇಷನ್ ಮಾಡಿ ಈ ಭ್ರಷ್ಟಾಚಾರವನ್ನು ಹೊರಗೆಳೆದಿತ್ತು. ಇದರ ಬೆನ್ನಲ್ಲೇ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.

ಹೌದು, ಮೇ.30ರಂದು ಸುವರ್ಣ ನ್ಯೂಸ್ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಿವೆ ಎನ್ನುವುದರ ಬಗ್ಗೆ ವಿಸ್ತೃತವಾದ ತನಿಖಾ ವರದಿ ಮೂಲಕ ಗಮನ ಸೆಳೆದಿತ್ತು. ಈ ವರದಿಗೆ ಆರೋಗ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಬೆಂಗಳೂರಿನಲ್ಲಿ 70 ವಾರ್ಡ್‌ಗಳಿಗೆ ಹಬ್ಬಿದ ಕೊರೋನಾ ವೈರಸ್..!

ಈ ವಿಚಾರ ಆರೋಗ್ಯ ಸಚಿವ ಬಿ ಶ್ರೀರಾಮುಲು ಗಮನಕ್ಕೆ ಬರುತ್ತಿದ್ದಂತೆ ಖಾಸಗಿ ಆಸ್ಪತ್ರೆಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹಣ ಸುಲಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಖಾಸಗಿ ಆಸ್ಪತ್ರೆಗಳಿಗೆ ಶುಲ್ಕ ನಿಗದಿ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಶ್ರೀರಾಮುಲು ಹೇಳಿದ್ದಾರೆ.