ಆಕ್ಸಿಜನ್ ಸಮಸ್ಯೆಯಿಂದ ದುರಂತ ನಡೆದಿದ್ದರೆ ಸರ್ಕಾರವೇ ಹೊಣೆ: ಬಿಜೆಪಿ ನಾಯಕ

 ಚಾಮರಾಜನಗರದ ಜಿಲ್ಲಾ ಆಸ್ಪತ್ರೆಗಳಲ್ಲಿ ಸಾವಿನ  ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರೊಬ್ಬರು ಪ್ರತಿಕ್ರಿಯಿಸಿದ್ದು,  ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿರುವುದು ಕ್ಷಮೆಗೆ ಅರ್ಹವಲ್ಲದ ಘಟನೆ. ಈ ಘಟನೆಗೆ ಸಚಿವರೇ ಹೊಣೆ ಆಗಿದ್ದರೆ ಅವರೇ ಹೊಣೆ ಹೊತ್ತುಕೊಳ್ಳಬೇಕು ಎಂದಿದ್ದಾರೆ.

First Published May 3, 2021, 7:29 PM IST | Last Updated May 3, 2021, 7:29 PM IST

ಬೆಂಗಳೂರು, (ಮೇ.03): ಚಾಮರಾಜನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಕಳೆದ 24 ಗಂಟೆಗಳಲ್ಲಿ 24 ಸೊಂಕಿತರು ಸಾವನ್ನಪ್ಪಿದ್ದಾರೆ. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾವನ್ನು ಫುಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಚಾಮರಾಜನಗರ ಆಸ್ಪತ್ರೆ ದುರಂತ: ಆಕ್ಸಿಜನ್‌ನಿಂದ ಸತ್ತಿಲ್ಲ ಎಂದು ಸರ್ಟಿಫಿಕೇಟ್ ಕೊಟ್ಟ ಸಚಿವರು

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರೊಬ್ಬರು ಪ್ರತಿಕ್ರಿಯಿಸಿದ್ದು,  ಚಾಮರಾಜನಗರದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿರುವುದು ಕ್ಷಮೆಗೆ ಅರ್ಹವಲ್ಲದ ಘಟನೆ. ಈ ಘಟನೆಗೆ ಸಚಿವರೇ ಹೊಣೆ ಆಗಿದ್ದರೆ ಅವರೇ ಹೊಣೆ ಹೊತ್ತುಕೊಳ್ಳಬೇಕು ಎಂದಿದ್ದಾರೆ.