ಮನೆ ಮಹಾಲಕ್ಷ್ಮಿಗೆ ‘ಗೃಹಲಕ್ಷ್ಮಿ’ಯ ಅನುಗ್ರಹ: ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸಬೇಕಿಲ್ಲ..!
ಮನೆ ಮನೆ ಮಹಾಲಕ್ಷ್ಮಿಯರಿಗೆ.. ಗೃಹಲಕ್ಷ್ಮಿ ಗ್ಯಾರಂಟಿ..!
ಪ್ರತಿ ತಿಂಗಳೂ 2 ಸಾವಿರ.. ಅರ್ಜಿ ಹಾಕುವುದು ಹೇಗೆ..?
ಅರ್ಜಿ ಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು..?
ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮಿ ಯೋಜನೆಗೆ(Grilakshmi Scheme) ಅಧಿಕೃತ ಜಾಲನೆ ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ಮನೆ ಮನೆ ಮಹಾಲಕ್ಷ್ಮಿಯರು ಫುಲ್ ಖುಷ್ ಆಗಿದ್ದಾರೆ. ಪಂಚ ಗ್ಯಾರಂಟಿಗಳ ಬಲದಿಂದ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್(Congress) ಈಗಾಗಲೇ ಶಕ್ತಿ, ಗೃಹಜ್ಯೋತಿ ಹಾಗೂ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆಯುತ್ತಿದ್ದೇವೇ ಅಂತ ಹೇಳಿತ್ತು. ಈ ಬೆನ್ನಲ್ಲೇ ಸ್ವಲ್ಪ ಲೇಟ್ ಆದ್ರು ಲೇಟೆಸ್ಟ್ ಆಗಿ ಮತ್ತೊಂದು ಮಹಾತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅರ್ಜಿ ನೊಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ಸಂಜೆ 6 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ್ರು. ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಆದೇಶವನ್ನು ಡಿಸಿಎಂ ಡಿ.ಕೆ. ಶಿವಕುಮಾರ್(DCM DK Shivakumar) ಹಂಚಿಕೆ ಮಾಡಿದ್ರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಯೋಜನೆಯ ಲಾಂಛನ ಮತ್ತು ಪೋಸ್ಟರ್ ಅನಾವರಣಗೊಳಿಸಿದ್ರು.
ಇದನ್ನೂ ವೀಕ್ಷಿಸಿ: ತನಿಖೆ ನಡೆಯುತ್ತಿದ್ದು, ಈಗಲೇ ಉಗ್ರರು ಎಂದು ಹೇಳಲಾಗುವುದಿಲ್ಲ: ಡಾ.ಜಿ. ಪರಮೇಶ್ವರ್