Asianet Suvarna News Asianet Suvarna News

ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಸಿದ್ಧತೆ: ಆ.16 ರಂದು ಹಣ ಹಾಕಲಿರುವ ಸರ್ಕಾರ

ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಹಣವನ್ನು ಹಾಕುವ ಗೃಹಲಕ್ಷ್ಮಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ನಾಳೆ ಚಾಲನೆ ನೀಡಲಿದ್ದಾರೆ.

ರಾಜ್ಯ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿಗೆ(Gruhalakshmi)ನಾಳೆ ಅದ್ಧೂರಿ ಚಾಲನೆ ಸಿಗಲಿದೆ. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಈ ಯೋಜನೆಗೆ ಗ್ರೀನ್‌ ಸಿಗ್ನಲ್‌ ಸಿಗಲಿದೆ. ಬುಧವಾರ ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ( CM Siddaramaiah) ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಮೂಲಕ ಮನೆ ಯಜಮಾನಿ ಖಾತೆಗೆ 2 ಸಾವಿರ ರೂಪಾಯಿ ಹಣವನ್ನು ಸರ್ಕಾರ ಹಾಕಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದಲೂ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜುಲೈ 20 ರಿಂದ ಈ ಯೋಜನೆಗೆ ಅರ್ಜಿ(Application) ಸಲ್ಲಿಸಬಹುದಾಗಿದೆ. ಗ್ರಾಮ್‌ ಒನ್‌, ಬೆಂಗಳೂರು ಒನ್‌, ನಾಡ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆಗಸ್ಟ್‌ 16 ರಂದು ಸರ್ಕಾರ ಎರಡು ಸಾವಿರ ರೂಪಾಯಿ ಹಾಕಲಿದೆ. 

ಇದನ್ನೂ ವೀಕ್ಷಿಸಿ:  ಮೋದಿ ವಿರುದ್ಧ ವಿಪಕ್ಷಗಳ ಮಹಾಘಟಬಂಧನ್‌ ಅಸ್ತ್ರ: ಬೆಂಗಳೂರಿನಲ್ಲಿ 26 ಪಕ್ಷಗಳ ಸಭೆ

Video Top Stories