Tumakuru Accident: ಮೃತರ ಕುಟುಂಬಕ್ಕೆ 50 ಸಾವಿರ ರೂ, ಗಾಯಾಳುಗಳಿಗೆ 10 ಸಾವಿರ ರೂ ಎಚ್‌ಡಿಕೆ ನೆರವು
ಪಾವಗಡ ಬಸ್ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಗಾಯಾಳುಗಳಿಗೆ 10 ಸಾವಿರ ರೂ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ 50 ಸಾವಿರ ರೂ ನೆರವು ನೀಡುವುದಾಗಿ ಹೇಳಿದ್ದಾರೆ.
ತುಮಕೂರು (ಮಾ. 20): ಪಾವಗಡ ಬಸ್ ದುರಂತದ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ಗಾಯಾಳುಗಳಿಗೆ 10 ಸಾವಿರ ರೂ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಮೃತರ ಕುಟುಂಬಗಳಿಗೆ 50 ಸಾವಿರ ರೂ ನೆರವು ನೀಡುವುದಾಗಿ ಹೇಳಿದ್ದಾರೆ.
ಬೈಕ್- ಬಸ್ ನಡುವೆ ಡಿಕ್ಕಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
'ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೆರವಾಗಬೇಕಿದೆ. ಅವರ ಕುಟುಂಬಸ್ಥರಿಗೆ 25 ಲಕ್ಷ ರೂ ಪರಿಹಾರ ನೀಡಬೇಕು. ಈ ದುರಂತಕ್ಕೆ ಸರ್ಕಾರವೇ ಹೊಣೆ. ಸರಿಯಾದ ಬಸ್ ವ್ಯವಸ್ಥೆ ಮಾಡಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ಮಕ್ಕಳನ್ನು ಕಳೆದುಕೊಂಡು ಕಂಗಾಲಾದ ಕುಟುಂಬಗಳಿಗೆ ನೆರವು ನೀಡಿ' ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.