2011ರ ದೂರು ಅಸ್ತ್ರ ಝಳಪಿಸಿದ ಕಾಂಗ್ರೆಸ್, ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ!

ಮುಡಾ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಹೆಚ್‌ಡಿ ಕುಮಾರಸ್ವಾಮಿಗೆ ಶಾಕ್ ಎದುರಾಗಿದೆ. ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರು ನೀಡಿದ್ದ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ, ಜಮ್ಮು ಮತ್ತು ಕಾಶ್ಮೀರ ಚುನಾವಣೆ ಕಾವು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಮುಡಾ ಹಗರಣ ಸಂಕಷ್ಟ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ಗೆ ತಲೆನೋವಾಗುತ್ತಿದ್ದಂತೆ ಇದೀಗ 2011ರ ದೂರಿನ ಕುರಿತು ಮಹತ್ವದ ಬೆಳವಣಿಗೆಯಾಗಿದೆ. 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್‌ಡಿ ಕುಮಾರಸ್ವಾಮಿ ನೀಡಿದ ಗಣಿ ಗುತ್ತಿಗೆಯಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ದೂರು ಇದೀಗ ಕೋಲಾಹಲ ಸೃಷ್ಟಿಸಿದೆ. ಇದೀಗ ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಸಂಕಷ್ಟ ಶುರುವಾಗಿದೆ. ಆಗಸ್ಟ್ 19 ರಂದು ಲೋಕಾಯುಕ್ತ ಎಸ್‌ಐಟಿ ರಾಜಭವನಕ್ಕೆ ಪತ್ರ ನೀಡಿದ್ದು, ಚಾರ್ಜ್ ಶೀಟ್‌ಗೆ ಅನುಮತಿ ಕೋರಿದೆ. ಮುಡಾ ಪ್ರಕರಣ, ಹೆಚ್‌ಡಿಕೆ ಪ್ರಾಸಿಕ್ಯೂಷನ್ ಸಂಕಷ್ಟ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ಇಲ್ಲಿದೆ.

Related Video