Hubballi Riot: ಕಿಡಿಗೇಡಿಗಳನ್ನ ಬಿಡ್ಬೇಡಿ, ಅಮಾಯಕರಿಗೆ ತೊಂದ್ರೆ ಕೊಡ್ಬೇಡಿ ಎಂದ ಎಚ್‌ಡಿಕೆ

ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‌ʼನಿಂದ ಹುಬ್ಬಳ್ಳಿಯಲ್ಲಿ  (Hubballi Riot) ನಡೆದ ಗಲಾಟೆಗೆ ಸಂಬಂಧಿಸಿ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ ಕಮಿಷನರ್ ಜೊತೆ ಮಾತನಾಡಿದ್ದೇನೆ. ಅಮಾಯಕರಿಗೆ ತೊಂದರೆ ಬೇಡ' ಎಂದು ಎಚ್‌ಡಿಕೆ (HD Kumaraswamy) ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 18): ಹುಬ್ಬಳ್ಳಿ ಗಲಭೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ. 

'ಹುಬ್ಬಳ್ಳಿ (Hubballi) ಸದಾ ಶಾಂತಿಯನ್ನು ಬಯಸುವ ನಗರ. ಸಾಹಿತ್ಯ, ಸಾಂಸ್ಕೃತಿಕ ಪರಂಪರೆಯುಳ್ಳ ತಾಣ. ಕೆಲ ವರ್ಷಗಳಿಂದ ಇಲ್ಲಿ ಎಲ್ಲ ಸಮುದಾಯದವರು ಸಹೋದರರಾಗಿ ಬಾಳಿ ಬದುಕುತ್ತಿದ್ದಾರೆ. ಬವಣೆಯಲ್ಲಿ ಬೇಯುತ್ತಿರುವ ಬದುಕನ್ನು ಕಟ್ಟಿಕೊಳ್ಳುವ ಬದಲು ಕೋಮುದಳ್ಳುರಿ ಹರಡುವುದು ಬೇಡ. ಅಂಜುಮನ್ ಸಂಸ್ಥೆ ಮುಖಂಡರ ಜತೆ ತೆರಳಿ ಪೊಲೀಸರಿಗೆ ಮನವಿ ಕೊಡಿ ಎಂದು ಈಗಾಗಲೇ ನಮ್ಮ ಪಕ್ಷದ ಮುಖಂಡರಿಗೂ ಸೂಚಿಸಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮುಗ್ಧರಿಗೆ ಅನ್ಯಾಯ ಆಗದಿರಲಿ ಎನ್ನುವುದು ನನ್ನ ಮನವಿ. ತಿಳಿಗೇಡಿ ಯುವಕನ ಪ್ರಚೋದನಾತ್ಮಕ ಪೋಸ್ಟ್‌ʼನಿಂದ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ, ಕಿಡಿಗೇಡಿಗಳ ಜತೆಗೆ ಕೆಲ ಅಮಾಯಕರನ್ನೂ ಪೊಲೀಸರು ಬಂಧಿಸಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಉದ್ರಿಕ್ತ ಮತಿಗೇಡಿ ಯುವಕರು ಎಸಗಿದ ಕೃತ್ಯಕ್ಕೆ ಸಂಬಂಧವಿಲ್ಲದವರನ್ನೂ ವಶಕ್ಕೆ ಪಡೆಯಲಾಗಿದೆ. ಹುಬ್ಬಳ್ಳಿ ಕಮಿಷನರ್ ಜೊತೆ ಮಾತನಾಡಿದ್ದೇನೆ. ಅಮಾಯಕರಿಗೆ ತೊಂದರೆ ಬೇಡ' ಎಂದಿದ್ದಾರೆ. 

Related Video