New Year 2022: ಡಿ 28 ರಿಂದ ಜ. 06 ರವರೆಗೆ ನೈಟ್ ಕರ್ಫ್ಯೂ ಜಾರಿ

ರಾಜ್ಯಾದ್ಯಂತ ಒಮಿಕ್ರೋನ್‌ ಪ್ರಕರಣಗಳು (Omicron Variant) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ವಾರದಿಂದ ಕೋವಿಡ್‌ ನಿಯಮಾವಳಿಗಳನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ತಜ್ಞರು, ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ಧಾರೆ. 

First Published Dec 26, 2021, 1:02 PM IST | Last Updated Dec 26, 2021, 1:04 PM IST

ಬೆಂಗಳೂರು (ಡಿ. 26): ರಾಜ್ಯಾದ್ಯಂತ ಒಮಿಕ್ರೋನ್‌ ಪ್ರಕರಣಗಳು (Omicron Variant) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ವಾರದಿಂದ ಕೋವಿಡ್‌ ನಿಯಮಾವಳಿಗಳನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ತಜ್ಞರು, ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ಧಾರೆ. 

Omicron Threat: ಕರುನಾಡಿಗೆ ಶಾಕ್ ಮೇಲೆ ಶಾಕ್ ಕೊಡ್ತಿದೆ ಒಮಿಕ್ರೋನ್: ಆತಂಕದಲ್ಲಿ ಜನತೆ

ರಾಜ್ಯಾದ್ಯಂತ ಡಿ 28 ರಿಂದ 10 ದಿನಗಳ ಕಾಲ ಅಂದರೆ ಜ. 06 ರವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ (Night Curfew) ವಿಧಿಸಲಾಗುತ್ತದೆ. ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗ ಆಚರಣೆಯನ್ನು ನಿಷೇಧಿಸಲಾಗಿದೆ. ಬಾರ್, ರೆಸ್ಟೋರೆಂಟ್, ಹೊಟೇಲ್‌ಗಳಲ್ಲಿ ಶೇ. 50 ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ' ಎಂದು ಸಭೆಯ ಬಳಿಕ ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 

Video Top Stories