ಬೆಂಗಳೂರಿನಲ್ಲಿ ಭಾರೀ ಮಳೆ, ಮುಳುಗಿದ ರಸ್ತೆ, ಕಾರು, ಬೈಕುಗಳು ಜಖಂ, ಕೊಟ್ಟಿಗೆ ನೀರುಪಾಲು
ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಗೆ ಕೆಲವೆಡೆ ಮರ ಮತ್ತು ಮರದ ಕೊಂಬೆಗಳು ಮುರಿದು ಬಿದ್ದಿವೆ. ನಗರದ ಪ್ರಮುಖ ರಸ್ತೆಗಳು, ಅಂಡರ್ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು.
ಬೆಂಗಳೂರು (ಅ.04): ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಗೆ ಕೆಲವೆಡೆ ಮರ ಮತ್ತು ಮರದ ಕೊಂಬೆಗಳು ಮುರಿದು ಬಿದ್ದಿವೆ. ನಗರದ ಪ್ರಮುಖ ರಸ್ತೆಗಳು, ಅಂಡರ್ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು.
ಧಾರಾಕಾರ ಮಳೆಗೆ ಸಾವಿನ ಗುಂಡಿಗಳಾದ ಬೆಂಗಳೂರು ರಸ್ತೆಗಳು, ಹೆಚ್ಚುತ್ತಿವೆ ಅಪಘಾತ
ರಾಜಕಾಲುವೆ ನೀರು ನುಗ್ಗಿ, ದನದ ಕೊಟ್ಟಿಗೆ ಜಲಾವೃತವಾಗಿತ್ತು. ರೈತ ಅಂದಾನಪ್ಪ ಎಂಬುವವರು ಸಾಕಿದ್ದ ಎಮ್ಮೆಯೊಂದು ಸಾವನ್ನಪ್ಪಿದೆ. ಶಿವಾನಂದ ಸರ್ಕಲ್, ಕೆ.ಆರ್. ಮಾರುಕಟ್ಟೆ, ಕೆ.ಆರ್. ಸರ್ಕಲ್, ಇನ್‌ಫೆಂಟ್ರಿ ರಸ್ತೆ, ಶಿವಾಜಿ ನಗರ, ಮೈಸೂರು ರಸ್ತೆ, ನಾಯಂಡಹಳ್ಳಿ ಜಂಕ್ಷನ್, ಓಕಳೀಪುರಂ ರಸ್ತೆ ಅಂಡರ್‌ಪಾಸ್, ಸುಜಾತ, ರಾಜಭನದ ರಸ್ತೆ, ಲಿಂಗರಾಜಪುರಂ ಅಂಡರ್ ಪಾಸ್ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು.