ಧಾರಾಕಾರ ಮಳೆಗೆ ಸಾವಿನ ಗುಂಡಿಗಳಾದ ಬೆಂಗಳೂರು ರಸ್ತೆಗಳು, ಹೆಚ್ಚುತ್ತಿವೆ ಅಪಘಾತ

ಬೆಂಗಳೂರು ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಪ್ರಮುಖ ರಸ್ತೆಗಳು, ಅಂಡರ್‌ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು. 
 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 04): ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಪ್ರಮುಖ ರಸ್ತೆಗಳು, ಅಂಡರ್‌ ಪಾಸ್‌ಗಳು ಸಂಪೂರ್ಣ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನಜೀವನ ಅಸ್ತವ್ಯಸ್ತವಾಯಿತು. 

ಬೆಂಗಳೂರಿನಲ್ಲಿ ಭಾರೀ ಮಳೆ, ಮುಳುಗಿದ ರಸ್ತೆ, ಕಾರು, ಬೈಕುಗಳು ಜಖಂ, ಕೊಟ್ಟಿಗೆ ನೀರುಪಾಲು

ಶಿವಾನಂದ ಸರ್ಕಲ್‌, ಕೆ.ಆರ್‌. ಮಾರುಕಟ್ಟೆ, ಕೆ.ಆರ್‌. ಸರ್ಕಲ್‌, ಇನ್‌ಫೆಂಟ್ರಿ ರಸ್ತೆ, ಶಿವಾಜಿ ನಗರ, ಮೈಸೂರು ರಸ್ತೆ, ನಾಯಂಡಹಳ್ಳಿ ಜಂಕ್ಷನ್‌, ಓಕಳೀಪುರಂ ರಸ್ತೆ ಅಂಡರ್‌ಪಾಸ್‌, ಸುಜಾತ, ರಾಜಭನದ ರಸ್ತೆ, ಲಿಂಗರಾಜಪುರಂ ಅಂಡರ್‌ ಪಾಸ್‌ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು. ಮಾಗಡಿ ರಸ್ತೆಯ ಸುಂಕದಕಟ್ಟೆ ಬಳಿ ರಸ್ತೆಯುದ್ದಕ್ಕೂ ಗುಂಡಿಗಳು ಬಿದ್ದಿವೆ. ಇದರಿಂದ ವಾಹನ ಸವಾರರು ಪರದಾಡುವಂತಾಯಿತು. 

Related Video