ಹೊಸನಗರ ತಾಲೂಕು ಹಳ್ಳ-ಕೊಳ್ಳಗಳು ಭರ್ತಿ; ಹತ್ತಾರು ಎಕರೆ ಭತ್ತದ ಗದ್ದೆ ಜಲಾವೃತ
ಶಿವಮೊಗ್ಗ ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಹೊಸನಗರ ತಾಲೂಕಿನ ಹಿಡ್ಲೆಮನೆ ಬಳಿ ನೂರಾರು ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ.
ಶಿವಮೊಗ್ಗ (ಆ. 07): ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ವರುಣನ ಆರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಹೊಸನಗರ ತಾಲೂಕಿನ ಹಿಡ್ಲೆಮನೆ ಬಳಿ ನೂರಾರು ಎಕರೆ ಭತ್ತದ ಗದ್ದೆ ಜಲಾವೃತವಾಗಿದೆ. ಬೆಳೆದ ಬೆಳೆ ಕಣ್ಣೆದುರೇ ಕೊಚ್ಚಿ ಹೋಗುವುದನ್ನು ನೋಡಿ ರೈತರು ಕಂಗಾಲಾಗಿದ್ದಾರೆ.