Asianet Suvarna News Asianet Suvarna News

ಉಕ್ಕಿ ಹರಿದ ನದಿಗಳು..ಕರುನಾಡಿಗೆ ಪ್ರಳಯದ ಭೀತಿ: ಇಂದು ಡಿಸಿಗಳ ಜೊತೆ ಸಿಎಂ ಸಭೆ

ರಾಜ್ಯಾದ್ಯಂತ ಪುಷ್ಯ ಮಳೆ ಅಬ್ಬರ ಜೋರಾಗಿದ್ದು, ಹಲವೆಡೆ ಗುಡ್ಡ ಕುಸಿತವಾಗಿದೆ. ಇನ್ನೂ ಕೆಲವು ಕಡೆ ರಸ್ತೆಗಳು ಜಲಾವೃತವಾಗಿವೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯನ(Rain) ಅಬ್ಬರ ಜೋರಾಗಿದೆ. ಕೆಲವು ಕಡೆ ರಸ್ತೆಗಳು ಮಾಯವಾದ್ರೆ, ಇನ್ನೂ ಕೆಲವು ಕಡೆ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹಿನ್ನೆಲೆ ರಾಜ್ಯದ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೊಡಗು(Kodagu) ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ನದಿ(Kaveri River) ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಇನ್ನೂ ಸಾಗರ-ಶಿವಮೊಗ್ಗ ಸಂಪರ್ಕಿಸುವ ರಸ್ತೆ ಮೇಲೆ ಮರಬಿದ್ದ ಹಿನ್ನೆಲೆ ಸಂಚಾರಕ್ಕೆ ತೊಂದರೆಯಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆಯಿಂದ ಅಘನಾಶಿನಿ ನದಿ(Aghanashini River) ಉಕ್ಕಿ ಹರಿಯುತ್ತಿದೆ. ನದಿ ತೀರದ ಮನೆಗಳಿಗೆ ನೀರು ನುಗ್ಗಿದೆ. ಸೂರು ಕಳೆದುಕೊಂಡವರಿಗೆ ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಇದನ್ನೂ ವೀಕ್ಷಿಸಿ:  Today Horoscope: ಇಂದು ಚಂದ್ರ ಮಿಥುನ ರಾಶಿಯಲ್ಲಿದ್ದು, ಈ ರಾಶಿಯವರ ಶುಭಫಲಗಳು ಹೀಗಿವೆ..

Video Top Stories