ರಾಜ್ಯದಲ್ಲಿ ಇನ್ನು ನಾಲ್ಕು ದಿನ ವರುಣನ ಆರ್ಭಟ, ಜೋಪಾನ
- ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ
- ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ
- ಮೇ 15 ಮತ್ತು 16 ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ವ್ಯಾಪಕ ಮಳೆಯಾಗುವ ನಿರೀಕ್ಷೆ
ಬೆಂಗಳೂರು (ಮೇ 14): ಅರಬ್ಬೀ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಚಂಡಮಾರುತ ತೀವ್ರಗೊಳ್ಳಲಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯಕ್ಕೆ ಅಪ್ಪಳಿಸಲಿದೆ ತೌಕ್ತೆ ಚಂಡಮಾರುತ: 8 ಜಿಲ್ಲೆಗಳಲ್ಲಿ ಭಾರೀ ಮಳೆ
ಉತ್ತರ ಕನ್ನಡ. ಉಡುಪಿ. ದಕ್ಷಿಣ ಕನ್ನಡದ ಕೆಲವು ಕಡೆಗಳಲ್ಲಿ ಮೇ 14 ಮತ್ತು 17 ರಂದು ಬಾರಿ ಮಳೆಯಾಗುವ ಸಾಧ್ಯತೆ ಇದ್ದು, ಅರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ಜಿಲ್ಲೆಗಳಲ್ಲಿ ಮೇ 15 ಮತ್ತು 16 ರಂದು ವಿಪರೀತ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗಲಿದೆ, ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.