Belagavi Riot: ಗಲಭೆಯಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದ್ಯಾರು..?

ಬೆಳಗಾವಿಯಲ್ಲಿ (Belagavi) ಎಂಇಎಸ್‌ (MES) ಶಿವಸೇನೆ (Shivasene) ಕಾರ್ಯಕರ್ತರ ಪುಂಡಾಟ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದವು. 

First Published Dec 20, 2021, 4:34 PM IST | Last Updated Dec 20, 2021, 5:03 PM IST

ಬೆಂಗಳೂರು (ಡಿ. 20): ಬೆಳಗಾವಿಯಲ್ಲಿ (Belagavi) ಎಂಇಎಸ್‌ (MES) ಶಿವಸೇನೆ (Shivasene) ಕಾರ್ಯಕರ್ತರ ಪುಂಡಾಟ, ಸಂಗೊಳ್ಳಿ ರಾಯಣ್ಣನ ಪ್ರತಿಮೆ ಧ್ವಂಸ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಬೆಂಗಳೂರು, ಬೆಳಗಾವಿ ಸೇರಿದಂತೆ ಎಲ್ಲೆಡೆ ಬೀದಿಗಿಳಿದು ಪ್ರತಿಭಟನೆ, ರಾರ‍ಯಲಿ, ರಸ್ತೆ ತಡೆ ನಡೆಸಿದ ಕನ್ನಡಪರ ಹೋರಾಟಗಾರರು ಎಂಇಎಸ್‌ ನಿಷೇಧಕ್ಕೆ ಆಗ್ರಹಿಸಿದರು. ಎಂಇಎಸ್, ಶಿವಸೇನೆ ಪುಂಡಾಟ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 32 ಕ್ಕೇರಿದೆ.  ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಾಶಿವ ನಗರ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

Belagavi Riot: ಸೊಲ್ಲೆತ್ತದ ಕರ್ನಾಟಕದ ರಾಜಕಾರಣಿಗಳ ವಿರುದ್ಧ ಎಚ್‌ಡಿಕೆ ಕಿಡಿ  

ಭಾಷೆ ಹಾಗೂ ಭಾವನೆಗಳ ನಡುವೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ನಾಡದ್ರೋಹಿ ಕಾಂಗ್ರೆಸ್‌ ಹವಣಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಕನ್ನಡ ಧ್ವಜ ಮತ್ತು ಸ್ವಾತಂತ್ರ್ಯ ವೀರರಿಗೆ ಅಪಮಾನವಾಗಿರುವ ಕುರಿತು ‘ನಾಡದ್ರೋಹಿ ಕಾಂಗ್ರೆಸ್‌’ಎಂಬ ಹ್ಯಾಷ್‌ ಟ್ಯಾಗ್‌ನೊಂದಿಗೆ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಈ ಷಡ್ಯಂತ್ರ ರೂಪುಗೊಂಡಿರುವುದು ಕಾಂಗ್ರೆಸ್‌ ವಾರ್‌ ರೂಮಿನಲ್ಲೇ? ಎಂದು ಪ್ರಶ್ನೆ ಮಾಡಿದೆ. 

Video Top Stories