
ಮಂಕಿಪಾಕ್ಸ್ ವೈರಸ್ ಭೀತಿ: ಕರ್ನಾಟಕದಲ್ಲಿ ಹೈಅಲರ್ಟ್..!
* ಏರ್‌ಪೋರ್ಟ್‌ಗಳಲ್ಲಿ ಹದ್ದಿನ ಕಣ್ಣು ಇಡುವಂತೆ ಸೂಚನೆ
* ಬೆಂಗಳೂರು, ಮಂಗಳೂರು ಏರ್‌ಪೋರ್ಟ್‌ಗಳಲ್ಲಿ ತಪಾಸಣೆ ಚುರುಕು
* ವಿದೇಶಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ
ಬೆಂಗಳೂರು(ಜೂ.12): ವಿದೇಶಗಳಲ್ಲಿ ಮಂಕಿಪಾಕ್ಸ್ ವೈರಸ್ ಬೆಂಬಿಡದೆ ಕಾಡುತ್ತಿದೆ. ಸುಮಾರು 40 ದೇಶಗಳಲ್ಲಿ ಸಾವಿರಕ್ಕೂ ಹೆಚ್ಚು ಕೇಸ್‌ಗಳು ಪತ್ತೆಯಾಗುತ್ತಿವೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಹೈಅಲರ್ಟ್ ಘೋಷಿಸಲಾಗಿದೆ. ಏರ್‌ಪೋರ್ಟ್‌ಗಳಲ್ಲಿ ಹದ್ದಿನ ಕಣ್ಣು ಇಡುವಂತೆ ಸೂಚನೆ ನೀಡಲಾಗಿದೆ. ಬೆಂಗಳೂರು, ಮಂಗಳೂರು ಏರ್‌ಪೋರ್ಟ್‌ಗಳಲ್ಲಿ ತಪಾಸಣೆಯನ್ನ ಮತ್ತಷ್ಟು ಚುರುಕುಗೊಳಿಸಲಾಗಿದೆ. ವಿದೇಶಿ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯಗೊಳಿಸಲಾಗಿದೆ. ಸ್ಕ್ರೀನಿಂಗ್‌ಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.