ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ: ಸಿಎಂಗೆ ದಂಡ ವಿಧಿಸಿದ ಹೈಕೋರ್ಟ್‌

ಸಿಎಂ ಸಿದ್ದರಾಮಯ್ಯಗೆ ದಂಡ ವಿಧಿಸಿದ ಕೋರ್ಟ್
ಸಿಎಂ ಸೇರಿ ಮೂವರಿಗೆ 10 ಸಾವಿರ ರೂ. ದಂಡ
ವಿಶೇಷ ಕೋರ್ಟ್ ಎದುರು ಹಾಜರಾಗಲು ಸೂಚನೆ

First Published Feb 6, 2024, 4:03 PM IST | Last Updated Feb 6, 2024, 4:03 PM IST

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ(KS Eshwarappa) ಅವರ ರಾಜೀನಾಮೆಗೆ ಆಗ್ರಹಿಸಿ 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆ(Protest) ನಡೆಸಲಾಯಿತು. ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈಗೌಂಡ್ರ್ಸ್ ಠಾಣಾ ಪೊಲೀಸರು(Police) ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ  42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜಾರಿ ಮಾಡಿದ್ದ ಎನ್‌ಬಿಡಬ್ಲ್ಯೂ( ಜಾಮೀನು ರಹಿತ ಬಂಧನ ವಾರೆಂಟ್ )ಹಾಗೂ ವಿಶೇಷ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸಲು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah), ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.‌ಪಾಟೀಲ್ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಅರ್ಜಿ ಸಲ್ಲಿಸಿದ್ರು. ಈ ಅರ್ಜಿ ವಜಾಗೊಳಿಸಿ 10 ಸಾವಿರ ದಂಡ ವಿಧಿಸಿ ಹೈಕೋರ್ಟ್ ಆದೇಶಿಸಿದೆ. ‌ಜೊತೆಗೆ ಮಾರ್ಚ್ 6ರಂದು ಸಿದ್ದರಾಮಯ್ಯ ಎಂದು ವಿಶೇಷ ಕೋರ್ಟ್ ಮುಂದೆ ಹಾಜರಾಗಲು ಕೋರ್ಟ್‌ ಸೂಚಿಸಿದೆ.

ಇದನ್ನೂ ವೀಕ್ಷಿಸಿ:  ಅರುಣ್ ಪುತ್ತಿಲ ಪಕ್ಷ ಸೇರ್ಪಡಗೆ ಬಿಜೆಪಿಗೇ ಗಡುವು ಕೊಟ್ಟರಾ..? 3 ದಿನಗಳ ಒಳಗೆ ಒಂದು ನಿರ್ಧಾರಕ್ಕೆ ಬರುತ್ತಾ ಬಿಜೆಪಿ?

Video Top Stories