Covid 3rd Wave: ಬೇರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚಳ

ಕರ್ನಾಟಕದಲ್ಲಿ ಪ್ರಸ್ತುತ ಕೊರೋನಾ ಸೋಂಕಿನ ಉಚ್ಛ್ರಾಯ ಸ್ಥಿತಿಯಲ್ಲಿದೆ. ಸದ್ಯ ದೇಶದಲ್ಲಿಯೇ ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವುದು ಕರ್ನಾಟಕದಲ್ಲಿಯೇ!  ದಿನವೊಂದಕ್ಕೆ 20 ಸಾವಿರ ಕೇಸ್‌ಗಳು ಬೆಂಗಳೂರಿನಲ್ಲಿ ದಾಖಲಾಗುತ್ತಿವೆ. 

First Published Jan 27, 2022, 11:45 AM IST | Last Updated Jan 27, 2022, 12:38 PM IST

ಬೆಂಗಳೂರು (ಜ.27): ಕರ್ನಾಟಕದಲ್ಲಿ (Karnataka) ಪ್ರಸ್ತುತ ಕೊರೋನಾ (Coronavirus) ಸೋಂಕಿನ ಉಚ್ಛ್ರಾಯ ಸ್ಥಿತಿಯಲ್ಲಿದೆ. ಸದ್ಯ ದೇಶದಲ್ಲಿಯೇ (India) ಅತಿ ಹೆಚ್ಚು ಕೊರೋನಾ ಸೋಂಕಿತರು ಪತ್ತೆಯಾಗುತ್ತಿರುವುದು ಕರ್ನಾಟಕದಲ್ಲಿಯೇ! ಅದರಲ್ಲೂ, ಕಳೆದ ಕೆಲ ದಿನಗಳಿಂದ ಸೋಂಕು ಹೆಚ್ಚು ಬಾಧಿಸುವ ರಾಜ್ಯವೆಂದು ಹೇಳುವ ಮಹಾರಾಷ್ಟ್ರಕ್ಕಿಂತಲೂ ಒಂದೂವರೆಪಟ್ಟು ಅಧಿಕ ಮಂದಿ ಕರ್ನಾಟಕದಲ್ಲಿ ಸೋಂಕಿತರಾಗುತ್ತಿದ್ದಾರೆ. ಕಳೆದ ನಾಲ್ಕು ದಿನಗಳಿಂದ 40 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಾಗುತ್ತಿದ್ದಾರೆ. ಬೆಂಗಳೂರಿನಲ್ಲಿ ದಿನವೊಂದಕ್ಕೆ 20 ಸಾವಿರ ಕೇಸ್‌ಗಳು ದಾಖಲಾಗುತ್ತಿವೆ. 

Covid-19 Crisis: ಬಳ್ಳಾರಿ ಜಿಲ್ಲೆಯಲ್ಲಿ ಕೊರೋನಾ ಆರ್ಭಟ: ಶೇ.20 ಪಾಸಿಟಿವಿಟಿ!

ಫೆಬ್ರವರಿ ಎರಡನೇ ವಾರದಿಂದ ರಾಜ್ಯದಲ್ಲಿ ಕೊರೋನಾ ಕೇಸ್‌ಗಳು ಇಳಿಕೆಯಾಗಿಳಿವೆ ಎಂದು ವೈದ್ಯ ಮಂಜುನಾಥ್ ತಿಳಿಸಿದ್ದಾರೆ. ಕೊರೋನಾ ಹೊಸ ಪ್ರಕರಣಗಳು ಮಹಾರಾಷ್ಟ್ರ (Maharashtra) ಮತ್ತು ತಮಿಳುನಾಡಿನಲ್ಲಿ (Tamil Nadu) 30 ಸಾವಿರ, ಕೇರಳದಲ್ಲಿ 25 ಸಾವಿರ, ಉತ್ತರ ಪ್ರದೇಶ, ಆಂಧ್ರಪ್ರದೇಶ, ಗುಜರಾತ್‌ ಹಾಗೂ ಮಧ್ಯಪ್ರದೇಶದಲ್ಲಿ 15 ಸಾವಿರ, ದೆಹಲಿ ಹಾಗೂ ಪಶ್ಚಿಮ ಬಂಗಾಳದಲ್ಲಿ ಐದು ಸಾವಿರ ಆಸುಪಾಸಿಗೆ ಇಳಿಕೆಯಾಗಿವೆ. ಆದರೆ, ಕರ್ನಾಟಕದಲ್ಲಿ ಡಿ.23ರಂದು 50 ಸಾವಿರಕ್ಕೆ ಹೆಚ್ಚಳವಾಗಿದ್ದು, ಕಳೆದ ಎಂಟು ದಿನಗಳಿಂದ 40 ಸಾವಿರಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ.