Hijab Row: ಇಂದು ಹೈಕೋರ್ಟ್‌ನಲ್ಲಿ 'ಹಿಜಾಬ್' ಭವಿಷ್ಯ ನಿರ್ಧಾರ
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ‘ಹಿಜಾಬ್’ ವಿವಾದ (Hijab Row) ಕೊನೆಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ. ಹಿಜಾಬ್ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ (High Court) ಮುಂದೆ ಬರಲಿದೆ.
ಬೆಂಗಳೂರು (ಫೆ. 08): ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ‘ಹಿಜಾಬ್’ ವಿವಾದ (Hijab Row) ಕೊನೆಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದ್ದರೂ ರಾಜ್ಯದ ಅನೇಕ ಜಿಲ್ಲೆಗಳ ಕಾಲೇಜುಗಳಲ್ಲಿ ‘ಹಿಜಾಬ್-ಕೇಸರಿ ಶಾಲು’ ಬಿಸಿ ಇನ್ನೂ ಹೆಚ್ಚಾಗುತ್ತಿದೆ. ಇದರ ನಡುವೆಯೇ ಹಿಜಾಬ್ ಧರಿಸುವಿಕೆ ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ (High Court) ಮುಂದೆ ಬರಲಿದೆ.
News Hour: ಮೇಕ್ ಇನ್ ಇಂಡಿಯಾದ ಮಹತ್ವ ಸಾರಿದ ಮೋದಿ, ಹೊಸದಾಗಿ ಕಾಣಿಸಿಕೊಂಡ ನೀಲಿ ಶಾಲು
ಹಿಜಾಬ್ ಧರಿಸಿಯೇ ಕಾಲೇಜುಗಳಿಗೆ ಪ್ರವೇಶಕ್ಕೆ ಅನುಮತಿಸಲು ಕಾಲೇಜುಗಳ ಮುಖ್ಯಸ್ಥರಿಗೆ ಸೂಚನೆ ನೀಡುವಂತೆ ಕೋರಿ ವಿವಿಧ ಕಾಲೇಜುಗಳ ವಿದ್ಯಾರ್ಥಿನಿಯರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ತಕರಾರು ಅರ್ಜಿಗಳು ಇಂದು ವಿಚಾರಣೆಗೆ ಬರಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ.