ಯಾವುದೇ ಧರ್ಮದವರಾಗಲಿ, ಕಾನೂನು ಕೈಗೆತ್ತಿಕೊಳ್ಳುವವರನ್ನು ಬಿಡೋ ಪ್ರಶ್ನೆ ಇಲ್ಲ: ಆರಗ
ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ (Old Hubballi) ಪ್ರದೇಶದಲ್ಲಿ ತೀವ್ರ ಹಿಂಸಾಚಾರ (Riot) ಸಂಭವಿಸಿದೆ.
ಬೆಂಗಳೂರು (ಏ. 17): ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ (Old Hubballi) ಪ್ರದೇಶದಲ್ಲಿ ತೀವ್ರ ಹಿಂಸಾಚಾರ (Riot) ಸಂಭವಿಸಿದೆ.
Hubballi Riot: ತಪ್ಪಿತಸ್ಥರು ಮುಸಲ್ಮಾನರೇ ಕಾಣಿಸ್ತಾರಾ.? ಮುತಾಲಿಕ್‌ಗೆ AIMIM ಪ್ರಶ್ನೆ
ಪೊಲೀಸ್ ಠಾಣೆಗೆ (Police Station) ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಸಂಪೂರ್ಣ ಹುಬ್ಬಳ್ಳಿ ಪ್ರದೇಶದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ.
'ಕಾನೂನು (Law) ಕೈಗೆತ್ತಿಕೊಳ್ಳುವವರನ್ನು ಬಿಡುವ ಮಾತೇ ಇಲ್ಲ, ಯಾವುದೇ ಧರ್ಮದವರಾಗಲಿ ಬಿಡುವ ಮಾತೇ ಇಲ್ಲ, ಇದೊಂದು ವ್ಯವಸ್ಥಿತ ಸಂಚು. ಗಲಭೆ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸುತ್ತದೆ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದ್ದಾರೆ.