ಮೇ 31ರ ಬಳಿಕ ರಾಜ್ಯದಲ್ಲಿ ಹೋಟೆಲ್‌ಗಳು ಓಪನ್..?
ಮುಖ್ಯಮಂತ್ರಿಗಳು ಮೇ 31ರ ಬಳಿಕ ಹೋಟೆಲ್ ತೆರೆಯಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ವೆಜ್-ನಾನ್‌ವೆಜ್ ಹೋಟೆಲ್, ರೆಸ್ಟೋರೆಂಟ್‌ಗಳು ಜೂನ್ ಮೊದಲ ವಾರದಲ್ಲೇ ಆರಂಭವಾಗುವ ಸಾಧ್ಯತೆಯಿದೆ.
ಬೆಂಗಳೂರು(ಮೇ.26): ಲಾಕ್‌ಡೌನ್‌ನಿಂದಾಗಿ ಈಗಾಗಲೇ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಇದೀಗ ಹೋಟೆಲ್ ಮಾಲೀಕರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಗಳು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಮುಖ್ಯಮಂತ್ರಿಗಳು ಮೇ 31ರ ಬಳಿಕ ಹೋಟೆಲ್ ತೆರೆಯಲು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ವೆಜ್-ನಾನ್‌ವೆಜ್ ಹೋಟೆಲ್, ರೆಸ್ಟೋರೆಂಟ್‌ಗಳು ಜೂನ್ ಮೊದಲ ವಾರದಲ್ಲೇ ಆರಂಭವಾಗುವ ಸಾಧ್ಯತೆಯಿದೆ.
ಪಾದರಾಯನಪುರದಲ್ಲಿ ಕೊರೊನಾ ಭಯ, ಕಾರ್ಪೋರೇಟರ್‌ಗೆ ಬರ್ತಡೇ ಸಂಭ್ರಮ.!
ಮೇ.31ಕ್ಕೆ ನಾಲ್ಕನೇ ಹಂತದ ಲಾಕ್‌ಡೌನ್ ಮುಕ್ತಾಯವಾಗಲಿದೆ. ಅಷ್ಟರೊಳಗಾಗಿ ಹೋಟೆಲ್ ತೆರೆಯುವುದಕ್ಕೆ ಸಂಬಂಧಿಸಿದಂತೆ ಸೂಕ್ತ ಮಾರ್ಗಸೂಚಿ ಹೊರಡಿಸುವುದಾಗಿ ಮುಖ್ಯಮಂತ್ರಿಗಳು ಪದಾಧಿಕಾರಿಗಳಿಗೆ ತಿಳಿಸಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.