Asianet Suvarna News Asianet Suvarna News

32, 34: ರಾಜ್ಯದ ಜಿಲ್ಲೆಗಳೆಷ್ಟು ತಿಳಿಯದೆ ಒದ್ದಾಡಿದ ಬಿಜೆಪಿ ರಾಜ್ಯಾಧ್ಯಕ್ಷ!

Oct 17, 2019, 3:31 PM IST
  • facebook-logo
  • twitter-logo
  • whatsapp-logo

ಯಾದಗಿರಿ[ಅ.17]: ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಮ್ಮ ಹೇಳಿಕೆಗಳಿಂದ ಪದೇ ಪದೇ ಮುಜುಗರಕ್ಕೀಡಾಗುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎಂದು ತಿಳಿಯದೆ ಎಡವಟ್ಟು ಮಾಡಿಕೊಂಡಿದ್ದಾರೆ.

ಯಾದಗಿರಿಯ ಸರ್ಕಿಟ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ನಳಿನ್ ಕುಮಾರ್ ಕಟೀಲ್ ಎಡವಟ್ಟು ಮಾಡಿಕೊಂಡಿದ್ದು, ರಾಜ್ಯದಲ್ಲಿ 32, 34 ಜಿಲ್ಲೆಗಳಿವೆ ಎಂದು ಬಡಬಡಿಸಿದ್ದಾರೆ.

ಸದ್ಯ ಬಿಜೆಪಿ ರಾಜ್ಯಾಧ್ಯಕ್ಷರ ಈ ಹೇಳಿಕೆ ಭಾರೀ ವೈರಲ್ ಆಗುತ್ತಿದ್ದು, ಪಕ್ಷ ಹಾಗೂ ರಾಜ್ಯಾಧ್ಯಕ್ಷರನ್ನು ಮುಜುಗರಕ್ಕೀಡು ಮಾಡಿದೆ.

ಬಿಜೆಪಿಯಲ್ಲಿ ಬಣ ರಾಜಕೀಯ: BSY ಬೆಂಬಲಿಗರಿಗೆ ಕಚೇರಿಯಿಂದ ಗೇಟ್ ಪಾಸ್