Asianet Suvarna News Asianet Suvarna News

ದೇಶದ ಸ್ವಾತಂತ್ರ್ಯಕ್ಕಾಗಿ ಮಠದ ಭಕ್ತರನ್ನೆ ಹೋರಾಟಕ್ಕಿಳಿಸಿದ ಅಪರೂಪದ‌ ಮಠಾಧೀಶ ಮುರುಗೋಡು ಮಹಾದೇವರಪ್ಪ

. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇಂಚಗೇರಿ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ. 

First Published Aug 16, 2021, 10:42 AM IST | Last Updated Mar 29, 2022, 2:22 PM IST

ಹುಬ್ಬಳ್ಳಿ (ಆ. 16):  ಸ್ವಾತಂತ್ರ ಹೋರಾಟದಲ್ಲಿ  ಪಾಲ್ಗೊಂಡ ರಾಷ್ಟ್ರದ ಬೆರಳೆಣಿಕೆ ಮಠಗಳಲ್ಲಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠವು ಒಂದು. ತಮ್ಮ ಮಠದ ಸಾವಿರಾರು ಭಕ್ತರನ್ನ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ ಹೆಗ್ಗಳಿಕೆ ಇದೇ ಮಠದ ಮಠಾಧೀಶರಾಗಿದ್ದ ಸಂತ ಮಾಧವಾನಂದ ಪ್ರಭುಜಿಗಳಿಗೆ ಸಲ್ಲುತ್ತೆ.

75 ನೇ ಸ್ವಾತಂತ್ರ್ಯ ಸಂಭ್ರಮ: ಯಾದಗಿರಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಂದ ಧ್ವಜಾರೋಹಣ 

1938ರ ವೇಳೆಯಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡ ಮಾಧವಾನಂದ ಪ್ರಭುಜಿಗಳು ತಮ್ಮೊಂದಿಗೆ 20 ಸಾವಿರಕ್ಕೂ ಅಧಿಕ ಭಕ್ತರನ್ನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ರು . ಮಹಾದೇವರು ಹೇಗಾದರು ಮಾಡಿ ಬ್ರಿಟಿಷರ ಹುಟ್ಟಡಗಿಸಲು ನಿರ್ಧರಿಸಿ ತಮ್ಮ ಅನುಯಾಯಿಗಳೊಂದಿಗೆ ಸೇರಿ ಹುಲಕೋಟೆ, ಸಾವಳಗಿ, ಹೊರ್ತಿ ಪೊಲೀಸ್ ಠಾಣೆಗಳಿಗೆ ಮುತ್ತಿಗೆ ಹಾಕಿ ಶಸ್ತ್ರಾಸ್ತ್ರಗಳನ್ನ ಅಪಹರಿಸಿದ್ದರು. ಹಲವು ಅಂಚೆ, ನಾಡ ಕಚೇರಿಗೆ ಬೆಂಕಿ ಹಚ್ಚಿದ್ದರು. ಬ್ರಿಟಿಷರ ಸಂಪರ್ಕ ಸಾಧನವಾಗಿದ್ದ ರೈಲು ಹಳಿಗಳನ್ನ ಕಿತ್ತುಹಾಕಿ ಠಾಣೆಗಳನ್ನ ಧ್ವಂಸಗೊಳಿಸಿದ್ದರು.  ಇವರ ಸ್ವಾತಂತ್ರ್ಯಕ್ಕಾಗಿ ಹೋರಾಟ ಯಾವ ರೀತಿ ಇತ್ತು.? ಎಂಬುದಕ್ಕೆ ಈ ಸುದ್ದಿ ನೋಡಿ.