ಹುಬ್ಬಳ್ಳಿ ಹಿಂಸಾಚಾರದಲ್ಲಿ ಹಿಂದೂ-ಮುಸ್ಲಿಂ ಯಾರೇ ಇದ್ರೂ ಬಂಧಿಸಿ ಕ್ರಮ ಕೈಗೊಳ್ಳಿ: ಬಿಎಸ್‌ವೈ

'ಹುಬ್ಬಳ್ಳಿ ಹಿಂಸಾಚಾರದಲ್ಲಿ (Hubballi Riot) ಯಾರೇ ಇದ್ದರೂ ಬಂಧಿಸಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ. ಮತ್ತೊಮ್ಮೆ ಇಂತಹ ಘಟನೆ ಪುನಾರಾವರ್ತನೆ ಆಗಬಾರದು. ಅಪರಾಧಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ' ಎಂದು ಮಾಜಿ ಸಿಎಂ ಬಿಎಸ್‌ವೈ (BS Yediyurappa) ಪ್ರತಿಕ್ರಿಯಿಸಿದ್ದಾರೆ. 

First Published Apr 17, 2022, 2:42 PM IST | Last Updated Apr 17, 2022, 2:43 PM IST

ಬೆಂಗಳೂರು (ಏ. 17): ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ತೀವ್ರ ಹಿಂಸಾಚಾರ ಸಂಭವಿಸಿದೆ.

ಕಾನೂನು ಜೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ 

 ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಸಂಪೂರ್ಣ ಹುಬ್ಬಳ್ಳಿ ಪ್ರದೇಶದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ.

'ಹುಬ್ಬಳ್ಳಿ ಹಿಂಸಾಚಾರದಲ್ಲಿ ಯಾರೇ ಇದ್ದರೂ ಬಂಧಿಸಿ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ. ಮತ್ತೊಮ್ಮೆ ಇಂತಹ ಘಟನೆ ಪುನಾರಾವರ್ತನೆ ಆಗಬಾರದು. ಅಪರಾಧಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಿ' ಎಂದು ಮಾಜಿ ಸಿಎಂ ಬಿಎಸ್‌ವೈ ಪ್ರತಿಕ್ರಿಯಿಸಿದ್ದಾರೆ.