Hubballi riot: 'ಮುಸ್ಲಿಂ ಮನೆಗಳ ಮೇಲೆಯೂ ಕಲ್ಲು ತೂರಾಟ, ಯಾರೂ ಹೊರಬಂದಿಲ್ಲ'

ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ತೀವ್ರ ಹಿಂಸಾಚಾರ ಸಂಭವಿಸಿದೆ.

First Published Apr 17, 2022, 2:11 PM IST | Last Updated Apr 17, 2022, 2:44 PM IST

ಹುಬ್ಬಳ್ಳಿ (ಏ. 17):  ಫೇಸ್‌ಬುಕ್‌ನಲ್ಲಿ ವಿವಾದಾತ್ಮಕ ಪೋಸ್ಟ್‌ವೊಂದನ್ನು ಹಾಕಿರುವ ವಿಚಾರವಾಗಿ ಹಳೆ ಹುಬ್ಬಳ್ಳಿ ಪ್ರದೇಶದಲ್ಲಿ ತೀವ್ರ ಹಿಂಸಾಚಾರ ಸಂಭವಿಸಿದೆ.

ಕಾನೂನು ಕೈಗೆತ್ತಿಕೊಳ್ಳಬೇಡಿ, ಸರ್ಕಾರ ಸಹಿಸಲ್ಲ: ಮುಸ್ಲಿಂ ಸಂಘಟನೆಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿದ ಉದ್ರಿಕ್ತರ ಗುಂಪು, ಬಸ್ಸು ಮತ್ತಿತರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದೆ. ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ, ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಸಂಪೂರ್ಣ ಹುಬ್ಬಳ್ಳಿ ಪ್ರದೇಶದಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿದೆ.

'ಮುಸ್ಲಿಂ ಮನೆಗಳ ಮೇಲೆಯೂ ಕಲ್ಲು ತೂರಾಟ ನಡೆದಿದೆ. ಅವರು ಭಯದಿಂದ ಹೊರ ಬಂದಿಲ್ಲ, ಅವರು ಹೊರ ಬಂದು ಅವರ ಕೋಮಿನ ಜನಗಳ ಜೊತೆ ಮಾತನಾಡಿದ್ದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿತ್ತೇನೋ' ಎಂದು ಪ್ರತ್ಯಕ್ಷ ದರ್ಶಿ ಅನಿಲ್ ಬೆಟಗೇರಿ ಪ್ರತಿಕ್ರಿಯಿಸಿದ್ದಾರೆ.