
ಎಲ್ಲಾ ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ, ಬಿಜೆಪಿಯವರಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ
ಸ್ಬಾಮೀಜಿಗಳಿಗೆ (Seers) ನಾನು ಅವಮಾನ ಮಾಡಿಲ್ಲ. ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಬಿಜೆಪಿಯವರ ಟೀಕೆಗಳಿಗೆಲ್ಲಾ ಉತ್ತರ ಕೊಡಲ್ಲ' ಎಂದು ಸಿದ್ದರಾಮಯ್ಯ (Siddaramaiah) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು (ಮಾ. 26): ಸ್ವಾಮೀಜಿಗಳ (Seers) ನಾನು ಅವಮಾನ ಮಾಡಿಲ್ಲ. ಸ್ವಾಮೀಜಿಗಳ ಬಗ್ಗೆ ಅಪಾರ ಗೌರವವಿದೆ. ಬಿಜೆಪಿಯವರ ಟೀಕೆಗಳಿಗೆಲ್ಲಾ ಉತ್ತರ ಕೊಡಲ್ಲ' ಎಂದು ಸಿದ್ದರಾಮಯ್ಯ (Siddaramaiah) ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಸ್ವಾಮೀಜಿಗಳಿಗೆ ಅಗೌರವ ತೋರಿಲ್ಲ, ನನ್ನ ಹೇಳಿಕೆ ತಿರುಚಿ ಅಪಪ್ರಚಾರ: ಸಿದ್ದರಾಮಯ್ಯ ಸ್ಪಷ್ಟನೆ
ಹಿಜಾಬ್ ಅನ್ನು ಸಮರ್ಥಿಸಿಕೊಳ್ಳುವ ಬರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿದೆ. ‘ಮುಸ್ಲಿಂ ಹೆಣ್ಣು ಮಕ್ಕಳು ತಲೆ ಮೇಲೆ ದುಪ್ಪಟ ಹಾಕಿದರೆ ತಪ್ಪೇನಿದೆ? ಹಿಂದೂ ಹೆಣ್ಣುಮಕ್ಕಳು ಮತ್ತು ಸ್ವಾಮೀಜಿಗಳು ತಲೆ ಮೇಲೆ ಬಟ್ಟೆಹಾಕಿಕೊಂಡರೆ ಅದನ್ನೂ ಪ್ರಶ್ನಿಸುತ್ತೀರಾ’ ಎಂದು ಸಿದ್ದರಾಮಯ್ಯ ಅವರು ಹೇಳಿದ್ದು ಇದಕ್ಕೆ ಬಿಜೆಪಿ ನಾಯಕರು ಮತ್ತು ರಾಜ್ಯದ ಹಲವು ಸ್ವಾಮೀಜಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.