ಅಕ್ರಮ ಆಸ್ತಿ ಗಳಿಕೆ ಸಂಕಷ್ಟ: ಜಮೀರ್‌ ಅಹಮದ್‌ ಖಾನ್‌ ಅರ್ಜಿ ವಜಾ

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ತಡೆಗೆ ಕೋರಿ ಹೈಕೋರ್ಟ್‌ಗೆ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ‌ ಬಿ.ಝಡ್‌. ಜಮೀರ್ ಅಹಮದ್‌ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು (ಏ.06): ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ತಡೆಗೆ ಕೋರಿ ಹೈಕೋರ್ಟ್‌ಗೆ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ‌ ಬಿ.ಝಡ್‌. ಜಮೀರ್ ಅಹಮದ್‌ ಖಾನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವತಿಯಿಂದ ಶಾಸಕ ಜಮೀರ್‌ ಅಹಮದ್‌ ಖಾನ್‌ ವಿರುದ್ಧ ದಾಖಲಿಸಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಯುತ್ತಿತ್ತು. ಆದರೆ ಈಗ ಚುನಾವಣೆ ಸಂದರ್ಭದಲ್ಲಿ ಅಕ್ರಮ ಆಸ್ತಿ ತನಿಖೆಗೆ ತಡೆ ನೀಡಬೇಕು ಎಂದು ಕೋರಿ ಜಮೀರ್‌ ಅಹಮದ್ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿಯನ್ನು ಸಲ್ಲಿಕೆ ಮಾಡದ್ದರು. ಈ ಅರ್ಜಿಯನ್ನು ಗುರುವಾರ ಪರಿಶೀಲನೆ ಮಾಡಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ಪೀಠವು ತಡೆಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಈಗ ಮತ್ತಷ್ಟು ಸಂಕಷ್ಟ ಎದುರಾಗಿದೆ. 

Related Video