ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಹಗರಣ: ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದೆ ತಪ್ಪಾ..?:

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆಯುವ ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಕ್ಕೆ ಸೂರಿ ಪಾಯಲ್‌ ಎಂಬುವವರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದ ಆರೋಪ ಕೇಳಿಬಂದಿದೆ.

Share this Video
  • FB
  • Linkdin
  • Whatsapp

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ(State Pollution Control Board) ಜಟಾಪಟಿ ಶುರುವಾಗಿದ್ದು, ಮಂಡಳಿಯ ಅಧ್ಯಕ್ಷ ಹಾಗೂ ಸದಸ್ಯ ಕಾರ್ಯದರ್ಶಿ ನಡುವೆ ಗುದ್ದಾಟ ಆರಂಭವಾಗಿದೆ. ಸದಸ್ಯ ಕಾರ್ಯದರ್ಶಿ ಇಲಾಖೆಯಲ್ಲಿ ನಡೆಯುವ ಅಕ್ರಮದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದಕ್ಕೆ, ಅವರನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇಲಾಖೆಯಲ್ಲಿ 17 ಕೋಟಿ ಹಗರಣ ನಡೆದಿದೆ ಎಂದು ಸೂರಿ ಪಾಯಲ್‌(Suri Payal) ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಬಗ್ಗೆ ಪತ್ರ ಬರೆಯದಂತೆ ಮಂಡಳಿ ಅಧ್ಯಕ್ಷ ಶಾಂತ ತಿಮ್ಮಯ್ಯ(Shanta Thimmaiah) ಸೂಚಿಸಿದ್ದರಂತೆ. ಇದೀಗ ಅವರನ್ನು ಕೆಲಸದಿಂದ ಅಮಾನತು(suspend) ಸಹ ಮಾಡಲಾಗಿದೆ. ಈ ಹಿನ್ನೆಲೆ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸೂರಿ ಪಾಯಲ್‌ ಆರೋಪಿಸಿದ್ದಾರೆ.

ಇದನ್ನೂ ವೀಕ್ಷಿಸಿ: ಕಂಡೆಕ್ಟರ್‌ಗಳ ಕೆಲಸಕ್ಕೆ ಕುತ್ತು ತಂತಾ 'ಶಕ್ತಿ' ಯೋಜನೆ..?: ಮಹಿಳೆಯರ ತಪ್ಪಿಗೆ ಇವರಿಗ್ಯಾಕೆ ಶಿಕ್ಷೆ ?

Related Video