Asianet Suvarna News Asianet Suvarna News

IMA ಕೇಸ್: 2 ವಾರದಲ್ಲಿ ಬೇಗ್ ಆಸ್ತಿ ಜಪ್ತಿಗೆ ಹೈಕೋರ್ಟ್ ಆದೇಶ

- ರೋಷನ್‌ ಬೇಗ್‌ ಆಸ್ತಿ ಜಪ್ತಿ ಬಗ್ಗೆ 2 ವಾರದಲ್ಲಿ ನಿರ್ಧರಿಸಿ

- ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

- ರಾಜಕಾರಣಿ ಎಂಬ ಕಾರಣಕ್ಕೆ ಜಪ್ತಿ ತೆಗೆದುಕೊಳ್ಳುವಲ್ಲಿ ವಿಳಂಬ

ಬೆಂಗಳೂರು (ಜೂ. 12): ಐಎಂಎ ವಂಚನೆ ಪ್ರಕರಣ ದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್‌. ರೋಷನ್‌ ಬೇಗ್‌ ಅವರ ಆಸ್ತಿ ಜಪ್ತಿ ಮಾಡುವ ಸಂಬಂಧ ಎರಡು ವಾರದಲ್ಲಿ ತೀರ್ಮಾನ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ತಾಕೀತು ಮಾಡಿದೆ.

ಇಂದು ಸಾಹುಕಾರ್ ಸಿಡಿ ಕೇಸ್‌ಗೆ ಸ್ಪೋಟಕ ಟ್ವಿಸ್ಟ್ ಸಾಧ್ಯತೆ

ರಾಜಕಾರಣಿ ಎಂಬ ಕಾರಣಕ್ಕೆ ಜಪ್ತಿ ತೆಗೆದುಕೊಳ್ಳುವ ವಿಷಯದಲ್ಲಿ ತೀರ್ಮಾನ ತೆಗೆದುಕೊಳ್ಳುವಲ್ಲಿ ವಿಳಂಬ ಮಾಡಲಾಗುತ್ತಿದೆ ಎನ್ನುವ ಆರೋಪವಿದೆ. ಸರ್ಕಾರ ಸಹ ರೋಷನ್‌ ಬೇಗ್‌ ಆಸ್ತಿ ಜಪ್ತಿಗೆ ಹಿಂಜರಿಯುತ್ತಿದೆ. ಸರ್ಕಾರದ ನೀತಿ ನಿಜಕ್ಕೂ ನ್ಯಾಯಾಲಯಕ್ಕೆ ಅಚ್ಚರಿ ತರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.