ಕೋರಮಂಗಲದಲ್ಲಿ ಭೀಕರ ಅಪಘಾತ: ಹೊಸೂರು ಶಾಸಕರ ಮಗ, ಸೊಸೆ ಸೇರಿ 7 ಸಾವು!

ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

Share this Video
  • FB
  • Linkdin
  • Whatsapp

ಬೆಂಗಳೂರು(ಆ.31): ಕೋರಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಮಿಳುನಾಡಿನ ಹೊಸೂರು ಕ್ಷೇತ್ರದ ಶಾಸಕರ ಮಗ, ಸೊಸೆ ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರಾದ ಕರುಣಾಸಾಗರ್ ಹಹಾಗೂ ಬಿಂದು(28) ಇಬ್ಬರೂ ವೃತ್ತಿಯಲ್ಲಿ ವೈದ್ಯರು. 

ಹೌದು ಐಷಾರಾಮಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಿಎಂಕೆ ಶಾಸಕರ ಪುತ್ರ, ಸೊಸೆ ಸೇರಿ ಒಟ್ಟು ಏಳು ಮಂದಿ ಇದ್ದ ಕಾರು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡಿದೆ. ತಡರಾತ್ರಿ ಸುಮಾರು 1.45ಕ್ಕೆ ಸಂಭವಿಸಿದ ಈ ಭೀಕರ ಅಪಘಾತದಲ್ಲಿ ಹರಿಯಾಣ ಮೂಲದ ಉತ್ಸವ್(23), ಅಕ್ಷಯ್(23), ಡಾ. ಧನುಷಾ(21), ಇಶಿತಾ(21), ಕೇರಳ ಮೂಲದ ಅಕ್ಷಯ್ ಗೋಯಲ್(23), ಹುಬ್ಬಳ್ಳಿ ಮೂಲದ ರೋಹಿತ್(23) ಎಂಬವರು ಮೃತಪಟ್ಟಿದ್ದಾರೆ.

ಮೃತರಲ್ಲಿ ಕೆಲವರು ಕೋರಮಂಲದ ಪಿಜಿಯಲ್ಲಿ ವಾಸಿಸುತ್ತಿದ್ದರು. ಸದ್ಯ ಆಡುಗೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಸೇಂಟ್‌ ಜಾನ್ಸ್‌ ಆಸ್ಪತ್ರೆಯಲ್ಲಿ ಇಡಲಾಗಿದೆ. 

Related Video