Bhagavad Gita: ಭಗವದ್ಗೀತೆ ಪಠ್ಯಕ್ಕೆ ಗುಜರಾತಲ್ಲಿ ಸ್ವಾಗತ, ರಾಜ್ಯದಲ್ಲಿ ವಿರೋಧ

ಗುಜರಾತ್‌ನಲ್ಲಿ 6ರಿಂದ 12ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ನಮ್ಮ ರಾಜ್ಯದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. 

First Published Mar 19, 2022, 10:05 AM IST | Last Updated Mar 19, 2022, 12:51 PM IST

ಬೆಂಗಳೂರು (ಮಾ. 19): ಗುಜರಾತ್‌ನಲ್ಲಿ 6ರಿಂದ 12ನೇ ತರಗತಿಯ ಪಠ್ಯದಲ್ಲಿ ಭಗವದ್ಗೀತೆ ಸೇರಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ನಮ್ಮ ರಾಜ್ಯದಲ್ಲೂ ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಕುರಿತು ಚರ್ಚೆ ಆರಂಭವಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸುವುದಾಗಿ ಹೇಳಿಕೆ ನೀಡಿದ್ದಾರೆ. ಅದಕ್ಕೆ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ.

ಕರ್ನಾಟಕ ಪ್ರಗತಿ ಹೊಂದುತ್ತಿರುವ ರಾಜ್ಯವಾಗಿದೆ. ಶಿಕ್ಷಣ ವ್ಯವಸ್ಥೆ ಬದಲಿಸಲು ಹೋಗಬಾರದು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ. ಶಾಲಾ ಕಟ್ಟಡ ಮತ್ತಿತರ ಸೌಲಭ್ಯಗಳ ಬಗ್ಗೆ ಗಮನ ಕೊಡಬೇಕು ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.