Asianet Suvarna News Asianet Suvarna News

ಜಮೀರ್‌ 'ಅರಮನೆ'ಗೆ ಐಟಿ ದಾಳಿ!

Aug 5, 2021, 10:58 AM IST

ಬೆಂಗಳೂರು(ಆ.05): ಕಾಂಗ್ರೆಸ್​ ಶಾಸಕ ಜಮೀರ್ ಅಹ್ಮದ್​​ಗೆ ಬೆಳ್ಳಂ ಬೆಳಗ್ಗೆ ಐಟಿ ಅಧಿಕಾರಿಗಳು ಶಾಕ್​ ನೀಡಿದ್ದಾರೆ. ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬಂಬೂ ಬಜಾರ್ ರಸ್ತೆಯಲ್ಲಿರುವ ಜಮೀರ್ ಅಹ್ಮದ್ ಮನೆ ಮೇಲೆ ಇಂದು ಬೆಳಗ್ಗೆ ಐಟಿ ದಾಳಿ ನಡೆದಿದೆ.  

ಐಟಿ ಅಧಿಕಾರಿಗಳು ಎರಡು ಕಾರುಗಳಲ್ಲಿ ಬಂದಿದ್ದು, ಜಮೀರ್​ ಮನೆ ಮೇಲೆ ದಾಳಿ ನಡೆಸಿದ್ದಾರೆ. ಜಮೀರ್ ಅಹ್ಮದ್ ಸದ್ಯ ಮನೆಯಲ್ಲೇ ಇದ್ದಾರೆ ಎಂದು ತಿಳಿದು ಬಂದಿದೆ. ಐಟಿ ಅಧಿಕಾರಿಗಳು ಮನೆಯೊಳಗೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.