ಜಮೀರ್ ಅಹಮದ್‌ಗೆ ಮುಳುವಾಯ್ತಾ 'ಅರಮನೆ'? ಐಟಿ ದಾಳಿ ಹಿಂದಿನ ರಹಸ್ಯ!
ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು(ಆ.05): ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ನಿವಾಸದ ಮೇಲೆ ಇಂದು ಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಾಮರಾಜಪೇಟೆಯಲ್ಲಿರುವ ಶಾಸಕರ ಕಚೇರಿ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿಯಿರುವ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ ಮೇಲೆ ರೇಡ್ ನಡೆದಿದೆ. ಮನೆಯ ಮೇಲೆ ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಿದೆ. ಸುಮಾರು 15 ಮಂದಿ ಐಟಿ ಅಧಿಕಾರಿಗಳು 2 ಗಂಟೆಗಳಿಂದ ಸತತವಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ ಈ ದಾಳಿಗೆ ಕಾರಣವೇನು ಎಂಬ ಕುತೂಹಲಕಾರಿ ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದೆ.
ಶಾಸಕ ಜಮೀರ್ ಅಹ್ಮದ್ ಖಾನ್ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ, ವಿಶಾಲವಾದ ಜಾಗದಲ್ಲಿ ಭವ್ಯ ಬಂಗಲೆ ನಿರ್ಮಾಣ ಮಾಡಿದ್ದಾರೆ. ಕಂಟೋನ್ಮೆಂಟ್ ರೈಲು ನಿಲ್ದಾಣ ಬಳಿ ಅತ್ಯದ್ಭುತ ಮನೆ ನಿರ್ಮಿಸಿದ್ದರು. ಈ ಮನೆಯನ್ನು ಅರೇಬಿಕ್ ಶೈಲಿಯಲ್ಲಿ ನಿರ್ಮಾಣ ಮಾಡಲಾಗಿದೆ. ಅರಮನೆ ಕಟ್ಟುವಾಗಲೇ ಐಟಿ ಕಣ್ಣು ಬಿದ್ದಿತ್ತಾ? ಎನ್ನುವ ವಿಚಾರದ ಬಗ್ಗೆಯೂ ಈಗ ಚರ್ಚೆ ನಡೆಯುತ್ತಿದೆ. ಈ ಮನೆ ಕಟ್ಟಲು ಬಂದಿರುವ ಆದಾಯದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.