Asianet Suvarna News Asianet Suvarna News

ಮರೆಯಾದ ಮಾಜಿ ಡಾನ್; ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಸಂತಾಪ

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಇಂದು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಮುತ್ತಪ್ಪ ರೈ ಸಾವಿಗೆ ಸಂತಾಪ ಸೂಚಿಸಿದ್ದಾರೆ. 

First Published May 15, 2020, 3:02 PM IST | Last Updated May 15, 2020, 3:02 PM IST

ಬೆಂಗಳೂರು (ಮೇ. 15): ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಇಂದು ನಿಧನರಾಗಿದ್ದಾರೆ. ಕೆಲ ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಜಗದೀಶ್ ಮುತ್ತಪ್ಪ ರೈ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಮಾಜಿ ಡಾನ್, ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಮುತ್ತಪ್ಪ ರೈ ನಿಧನ

ರಾಜ್ಯದ ವಿವಿದೆಡೆ ಜಯಕರ್ನಾಟಕ ಸಂಘಟನೆ ಮೂಲಕ ಸಾಕಷ್ಟು ಪ್ರತಿಭೆಗಳನ್ನು ಪರಿಚಯಿಸಿದ್ದಾರೆ. ಯುವಕರಿಗೆ ಹೊಸ ಆಯಾಮ ತೋರಿಸಿಕೊಟ್ಟವರು. ರೈತರ ಪರವಾಗಿ ಪಾದಯಾತ್ರೆ ಮಾಡಿಸಿದ ವ್ಯಕ್ತಿ ಅವರು. ಈ ನಾಡು, ನುಡಿ ಬಗ್ಗೆ ಅಪಾರ ಅಭಿಮಾನ ಹೊಂದಿದ್ದರು. ಅಪಾರವಾದ ಅಭಿಮಾನಿ ಬಳವನ್ನು ಹೊಂದಿದ್ದರು. ಅವರ ಸಾವು ತುಂಬಲಾರದ ನಷ್ಟ' ಎಂದರು. 

Video Top Stories