
ಸರ್ಕಾರಕ್ಕೆ ಗಡುವು ಕೊಟ್ಟ ಜಯಮೃತ್ಯುಂಜಯ ಸ್ವಾಮೀಜಿ
ಪಂಚಮಸಾಲಿಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದು,ಪಂಚಮಸಾಲಿಗೆ 2ಎ ಮೀಸಲಾತಿ ನೀಡಲು ಗಡುವು ನೀಡಿದ್ದಾರೆ.
2ಎ ಮೀಸಲಾತಿಗಾಗಿ ಜಯಮೃತ್ಯುಂಜಯ ಸ್ವಾಮೀಜಿ ಬೊಮ್ಮಾಯಿ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. Sc ಹಾಗೂ St ಸಮುದಾಯ ಮೀಸಲಾತಿ ಹೆಚ್ಚಿಸಲು ತೀರ್ಮಾನಿಸಿದ ಬೆನ್ನಲ್ಲೇ ಇದೀಗ ಪಂಚಮಸಾಲಿಗೆ 2ಎ ಮೀಸಲಾತಿ ನೀಡ ಬೇಕೆಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಸ್ವಾಮೀಜಿ, ಅ.21ರೊಳಗೆ 2ಎ ಮೀಸಲಾತಿ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದಿದ್ದಾರೆ. ಮೀಸಲಾತಿ ನೀಡದಿದ್ದಲ್ಲಿ ಅ.21ರಂದು ಹುಕ್ಕೇರಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಬೃಹತ್ ಸಮಾವೇಶ ನಡೆಸಲಾಗುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.
ಕಟೀಲ್ ಆರೋಪ ಗಂಭೀರವಾಗಿ ಪರಿಗಣಿಸುವ ಹಾಗಿಲ್ಲ: ಮಾಜಿ ಸಚಿವ ಎಂ.ಬಿ.ಪಾಟೀಲ