ಮಹಾರಾಷ್ಟ್ರಕ್ಕೆ ರಾಜ್ಯದಿಂದ ನೀರು! BSY ಘೋಷಣೆಗೆ ತಿರುಗಿ ಬಿದ್ದ ರೈತರು!
ಮಹಾರಾಷ್ಟ್ರ ಚುನಾವಣಾ ಪ್ರಚಾರ ಕಣಕ್ಕೆ ಧುಮುಕಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಿಂದ ಮಹಾರಾಷ್ಟ್ರಕ್ಕೆ ನೀರು ಬಿಡುವುದಾಗಿ ಘೋಷಿಸಿದ್ದಾರೆ. ನೀವು ಮಹಾರಾಷ್ಟ್ರದ ಮುಖ್ಯಮಂತ್ರಿನೋ ಅಥವಾ ಕರ್ನಾಟಕದ ಮುಖ್ಯಮಂತ್ರಿನೋ ಎಂದು ಕಳಸಾ-ಬಂಡೂರಿ ಹೋರಾಟಗಾರರು ಪ್ರಶ್ನಿಸಿದ್ದಾರೆ.
ಬೆಂಗಳೂರು (ಅ.17): ಮಹಾರಾಷ್ಟ್ರ ಚುನಾವಣಾ ಪ್ರಚಾರ ಕಣಕ್ಕೆ ಧುಮುಕಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಿಂದ ಮಹಾರಾಷ್ಟ್ರಕ್ಕೆ ನೀರು ಬಿಡುವುದಾಗಿ ಘೋಷಿಸಿದ್ದಾರೆ.
ಮಹಾರಾಷ್ಟ್ರ ಮತದಾರರನ್ನು ಸೆಳೆಯುವ ಸಲುವಾಗಿ ಸಿಎಂ ಮಾಡಿದ ಘೋಷಣೆ, ಸಹಜವಾಗಿ ಉತ್ತರ ಕರ್ನಾಟಕ ಭಾಗದ ರೈತರು ಮತ್ತು ನೀರಾವಾರಿ ಹೋರಾಟಗಾರರನ್ನು ಕೆರಳಿಸಿದೆ.
ನೀವು ಮಹಾರಾಷ್ಟ್ರದ ಮುಖ್ಯಮಂತ್ರಿನೋ ಅಥವಾ ಕರ್ನಾಟಕದ ಮುಖ್ಯಮಂತ್ರಿನೋ ಎಂದು ಕಳಸಾ-ಬಂಡೂರಿ ಹೋರಾಟಗಾರರು ಪ್ರಶ್ನಿಸಿದ್ದಾರೆ.
288 ಸದಸ್ಯಬಲದ ಮಹಾರಾಷ್ಟ್ರ ವಿಧಾನಸಭೆಗೆ ಅ.21ರಂದು ಚುನಾವಣೆ ನಡೆಯಲಿದ್ದು, ಅ.24ಕ್ಕೆ ಫಲಿತಾಂಶ ಪ್ರಕಟವಾಗಲಿದೆ.