
ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್, SFI, PFI ವಿರೋಧ
ಮಂಗಳೂರು ವಿಶ್ವವಿದ್ಯಾನಿಲಯದ (Mangaluru University) ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆಎಸ್‌ಎಫ್‌ಐ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧ ವ್ಯಕ್ತಪಡಿಸಿದೆ.
ಮಂಗಳೂರು (ಮಾ. 30): ವಿಶ್ವವಿದ್ಯಾನಿಲಯದ (Mangaluru University) ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ (Kalladka Prabhakar Bhat) ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆಎಸ್‌ಎಫ್‌ಐ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿರೋಧ ವ್ಯಕ್ತಪಡಿಸಿದೆ.
Add Asianetnews Kannada as a Preferred Source

Halal Row: ಹಲಾಲ್ ಮಾಂಸ ಬಹಿಷ್ಕರಿಸಿದ್ರೆ ತಪ್ಪೇನಿದೆ..? ಚಕ್ರವರ್ತಿ ಸೂಲಿಬೆಲೆ
ಕೋಮು ಮತಾಂಧತೆಗೆ ವಿದ್ಯಾರ್ಥಿಗಳು ಬಲಿಯಾಗದಂತೆ ಎಚ್ಚರ ವಹಿಸುವ ಜವಾಬ್ದಾರಿ ಜಿಲ್ಲಾಡಳಿತಕ್ಕೆ ಇದೆ. ಕಾಲೇಜು ಕ್ಯಾಂಪಸ್‌ಗಳಲ್ಲಿ ಶಾಂತಿ ಕದಡದಂತೆ ಮುಂಜಾಗ್ರತೆಯ ಭಾಗವಾಗಿ ಈ ಕಾರ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಲು ಅವಕಾಶ ನೀಡದಂತೆ ಜಿಲ್ಲಾಡಳಿತ ನೋಡಿಕೊಳ್ಳಬೇಕು ಎಂದು ಎಸ್‌ಎಫ್‌ಐ ಜಿಲ್ಲಾ ಮುಖಂಡರಾದ ವಿನಿತ್ ದೇವಾಡಿಗ, ವಿನುಶ ರಮಣ ತಿಳಿಸಿದ್ದಾರೆ. ಕೂಡಲೆ ಈ ನಿರ್ಧಾರ ಹಿಂಪಡೆಯಬೇಕು ಎಂದು ಪಿಎಫ್‌ಐ ಸಂಘಟನೆ ಆಗ್ರಹಿಸಿದೆ.