8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ, ನೈಟ್ ಕರ್ಫ್ಯೂ ಅವಧಿ ಹೆಚ್ಚಳ, ಆ.16ವರೆಗೆ ಹೊಸ ನಿರ್ಬಂಧ

- ಮಹಾರಾಷ್ಟ್ರ, ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ವೀಕೆಂಡ್‌ ಕರ್ಫ್ಯೂ

- ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಅವಧಿ 1 ತಾಸು ಹೆಚ್ಚಳ

- ಆ.16ವರೆಗೆ ಸರ್ಕಾರದಿಂದ ಹೊಸ ನಿರ್ಬಂಧ ಜಾರಿ

First Published Aug 7, 2021, 10:52 AM IST | Last Updated Aug 7, 2021, 12:18 PM IST

ಬೆಂಗಳೂರು (ಆ. 07): ಕೊರೋನಾ ಮೂರನೇ ಅಲೆ ಬಾರದಂತೆ ತಡೆಯಲು ರಾಜ್ಯ ಸರ್ಕಾರ ಕೆಲವು ಮಹತ್ವದ ನಿರ್ಧಾರ ಕೈಗೊಂಡಿದೆ.  ಕೇರಳ ಹಾಗೂ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಎಂಟು ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ 9 ರಿಂದಲೇ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ರಾಜ್ಯಾದ್ಯಂತ ರಾತ್ರಿ 10 ಗಂಟೆಯಿಂದ ಇದ್ದ ನೈಟ್ ಕರ್ಫ್ಯೂವನ್ನು ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ವಿಸ್ತರಿಸಲಾಗಿದೆ.  

ವೀಕೆಂಡ್ ಕರ್ಫ್ಯೂ ವೇಳೆ ಅಗತ್ಯ ದಿನಸಿ, ತರಕಾರಿ, ಮಾಂಸ, ಡೈರಿ ಉತ್ಪನ್ನಗಳಿಗೆ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಮದ್ಯದ ಮಳಿಗೆಗಳಲ್ಲಿ ಮಧ್ಯಾಹ್ನ 2 ರವರೆಗೆ ಪಾರ್ಸೆಲ್‌ಗೆ ಮಾತ್ರ ಅವಕಾಶ ಹಾಗೂ ಹೋಟೆಲ್‌ಗಳಲ್ಲೂ ಪಾರ್ಸೆಲ್‌ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.