ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲ ಇಲ್ಲ, ಕೊರೊನಾ ಸಂಕಷ್ಟದ ವೇಳೆ ಬಂದ್ ಅಗತ್ಯ ಇಲ್ಲ: ನಾರಾಯಣಗೌಡ
ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ.
ಬೆಂಗಳೂರು (ನ. 21): ಮರಾಠ ನಿಗಮಕ್ಕೆ ಸರ್ಕಾರ ಅಸ್ತು ಎಂದಿದ್ದೇ ತಡ ಕನ್ನಡ ಪರ ಸಂಘಟನೆಗಳು ತಿರುಗಿ ಬಿದ್ದಿವೆ. ಡಿ. 05 ಕ್ಕೆ ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಆದರೆ ಬಂದ್ ಬಗ್ಗೆ ಕನ್ನಡ ಪರ ಸಂಘಟನೆಗಳ ನಡುವೆಯೇ ಭಿನ್ನಾಭಿಪ್ರಾಯವಿದೆ.
ಬಂದ್‌ಗೆ ನಮ್ಮ ಬೆಂಬಲ ಇಲ್ಲ. ಕೊರೊನಾ ಸಂಕಷ್ಟದ ವೇಳೆ ಬಂದ್ ಅವಶ್ಯಕತೆ ಇಲ್ಲ. ಬಂದ್ ಬದಲು ಕಪ್ಪು ಪಟ್ಟಿ ಪ್ರದರ್ಶನ ಮಾಡಬಹುದು. ಇದನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ನಮ್ಮ ಹೋರಾಟ ಮುಂದುವರೆಸುತ್ತೇವೆ' ಎಂದು ಕರವೇ ಅಧ್ಯಕ್ಷ ನಾರಾಯಣ ಗೌಡ ಹೇಳಿದ್ದಾರೆ.