ಸಚಿವ ಸಂಪುಟ ಸಭೆ ಕರೆದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ಆರಂಭವಾಗಲಿದ್ದು, ಲಾಕ್‌ಡೌನ್ ಸಡಿಲಿಕೆ, ಆರ್ಥಿಕತೆಗೆ ಪುನಶ್ಚೇತನ ಸೇರಿದಂತೆ ಹಲವು ಕ್ರಮಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

First Published Apr 30, 2020, 10:31 AM IST | Last Updated Apr 30, 2020, 10:31 AM IST

ಬೆಂಗಳೂರು(ಏ.30): ಮಹಾಮಾರಿ ಕೊರೋನಾ ವೈರಸ್ ಮುಕ್ತಿಗೆ ಕರ್ನಾಟಕ ಸರ್ಕಾರ ಟೊಂಕಕಟ್ಟಿ ನಿಂತಿದೆ. ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ಕರೆದಿದ್ದು, ಲಾಕ್‌ಡೌನ್ ಸಡಿಲಿಕೆ ಬಗ್ಗೆ ಬಿಎಸ್‌ವೈ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಸಚಿವ ಸಂಪುಟ ಸಭೆ ಜನಸಾಮಾನ್ಯರಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಗ್ರೀನ್‌ ಝೋನ್‌ನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಈ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇನ್ನು ಆರ್ಥಿಕ ಸುಧಾರಣೆಯ ಬಗ್ಗೆಯು ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಲಾಕ್‌​ಡೌ​ನ್‌​ನಿಂದ ಜೀವನ ನಿರ್ವ​ಹಣೆ ಕಷ್ಟ: ಹಂಪಿ ಪ್ರವಾಸಿ ಮಾರ್ಗದರ್ಶಿಗಳು ಕಂಗಾಲು

ಇನ್ನುಳಿದಂತೆ ರೆಡ್, ಆರೆಂಜ್ ಝೋನ್‌ಗಳಲ್ಲಿ ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆಯೂ ಮಾತುಕತೆ ನಡೆಯಲಿದೆ. ಮೇ 03ನಂತರ ಎರಡನೇ ಲಾಕ್‌ಡೌನ್ ಮುಗಿಯಲಿದ್ದು, ಆ ಬಳಿಕ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಯಡಿಯೂರಪ್ಪ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚೆ ನಡೆಸಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

Video Top Stories