News Hour: ನಾವು ಕೊಟ್ಟ ಅನ್ನಭಾಗ್ಯ ಅಕ್ಕಿಯಿಂದ ರಾಮಮಂದಿರದ ಮಂತ್ರಾಕ್ಷತೆ!
ನಾವು ಕೊಟ್ಟ ಅನ್ನಭಾಗ್ಯದ ಅಕ್ಕಿಯಿಂದ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿರುವ ಮಾತು ವಿವಾದಕ್ಕೆ ಕಾರಣವಾಗಿದೆ. ಈ ಮಾತಿಗೆ ಡಿಕೆಶಿ ಕ್ಷಮೆ ಕೇಳಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಬೆಂಗಳೂರು (ಜ.9): ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ದಿನ ಸನಿಹವಾಗುತ್ತಿದ್ದಂತೆಯೇ ರಾಜ್ಯದಲ್ಲಿ ಇದರ ಕ್ರೆಡಿಟ್ ವಾರ್ ಜೋರಾಗಿ ನಡೆಯುತ್ತಿದೆ. ಮಂಗಳವಾರ ರಾಜ್ಯ ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ರಾಮ ಮಂದಿರದ ಪೂಜೆಗೆ ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಎಂದು ಹೇಳುವ ಮೂಲಕ ಕ್ರೆಡಿಟ್ ವಾರ್ ಶುರು ಮಾಡಿತು.
ಈ ಕುರಿತಾಗಿ ಮಾತನಾಡುವ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಉದ್ಘಾಟನೆಗೆ ನಮ್ಮನ್ನ ಕರೆದಿಲ್ಲ, ನನ್ನನ್ನೂ ಆಹ್ವಾನಿಸಿಲ್ಲ. ಮುಖ್ಯಮಂತ್ರಿಗಳನ್ನೂ ಸಹ ಕರೆದಿಲ್ಲ. ನಾನು ಶಿವ ಭಕ್ತ. ಎಲ್ಲ ದೇವರುಗಳು ನನ್ನ ಹೃದಯದಲ್ಲಿದೆ. ನಮ್ಮ ಅಕ್ಕಿ ಮಂತ್ರಾಕ್ಷತೆಗೆ ಉಪಯೋಗಿಸಿಕೊಳ್ತಿದ್ದಾರೆ. ಅನ್ನಭಾಗ್ಯ ಯೋಜನೆ ಅಕ್ಕಿಯನ್ನೇ ಮಂತ್ರಾಕ್ಷತೆಗೆ ಬಳಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಇಲ್ಲಿದೆ ಸಾಕ್ಷಿ, ದೇಶದ ಅತಿದೊಡ್ಡ ತೀರ್ಥಕ್ಷೇತ್ರ-ಪ್ರವಾಸಿ ಸ್ಥಳವಾಗುವ ಹಾದಿಯಲ್ಲಿ ಅಯೋಧ್ಯೆ!
ಇದಕ್ಕೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಒಂದು ಕಾಳು ಅಕ್ಕಿಯನ್ನೂ ನೀವು ಕೊಟ್ಟಿಲ್ಲ. ಮೊದಲು ರಾಮನೇ ಇಲ್ಲ ಎಂದು ಹೇಳಿದ್ರಿ, ಈಗ ವಿವಾದ ಮಾಡೋದಕ್ಕೆ ಹೊರಟಿದ್ದೀರಿ ಎಂದು ಕೇಂದ್ರ ಸಚಿವವ ಪ್ರಲ್ಹಾದ್ ಜೋಶಿ, ಪ್ರತಾಪ್ ಸಿಂಹ, ಈಶ್ವರಪ್ಪ ಕಾಂಗ್ರೆಸ್ ಹಾಗೂ ಡಿಕೆ ಶಿವಕುಮಾರ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.