Asianet Suvarna News Asianet Suvarna News

ಬೆಲೆ ಏರಿಕೆ ವಿರುದ್ಧ ಇಂದು ಕಾಂಗ್ರೆಸ್‌ನಿಂದ ಸೈಕಲ್ ಜಾಥಾ, ಸಿದ್ದು, ಡಿಕೆಶಿಗೆ ಬೆಂಬಲಿಗರ ಸಾಥ್

Sep 20, 2021, 1:21 PM IST

ಬೆಂಗಳೂರು (ಸೆ. 20): ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಎತ್ತಿನಗಾಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿ ಪ್ರತಿಭಟಿಸಿದ್ದ ಕಾಂಗ್ರೆಸ್, ಇಂದು ಸೈಕಲ್‌ ಜಾಥಾ ಮೂಲಕ ಪ್ರತಿಭಟನೆ ನಡೆಸುತ್ತಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಪಕ್ಷದ ಇತರೆ ಅನೇಕ ಶಾಸಕರು, ವಿಧಾನ ಪರಿಷತ್‌ ಸದಸ್ಯರು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್‌ ಜಾಥಾ ನಡೆಸಿದ್ದಾರೆ. 

'ಹೈಕಮಾಂಡ್ ಅನುಮತಿ ಕೇಳಿದ್ದೇವೆ, ಇನ್ನುಂದು ತಿಂಗಳಲ್ಲಿ ಹಲವರು ಬಿಜೆಪಿ ಸೇರ್ತಾರೆ'

ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದು, ಕೂಡಲೇ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಮೇಲಿನ ರಾಜ್ಯದ ಪಾಲಿನ ತೆರಿಗೆಯನ್ನು ಇಳಿಸಬೇಕು. ಅದೇ ರೀತಿ ಕೇಂದ್ರ ಸರ್ಕಾರ ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯನ್ನು ಶೇ.50 ರಷ್ಟುಇಳಿಸಬೇಕೆಂದು ಆಗ್ರಹಿಸಿದ್ದಾರೆ.