ಶಾಲಾ ಘೋಷವಾಕ್ಯ ಬದಲಾವಣೆ ಸಮರ್ಥಿಸಿದ ಕಾಂಗ್ರೆಸ್ ನಾಯಕರು, ಬಿಜೆಪಿ ಕೆಂಡ!
ಕಾಂಗ್ರೆಸ್ ಆಡಳಿತದಲ್ಲಿ ಶಾಲೆಯಲ್ಲಿದ್ದ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾಗೆ ಕೊಕ್, ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂಬ ವಾಕ್ಯ ಶುರುವಾಗಿದೆ. ಇದು ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಶಾಲೆಗಳಲಲ್ಲಿ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಅನ್ನೋ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂದು ಬದಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಅಡಿಯಲ್ಲಿ ಬರುವ ಹಲವು ಶಾಲೆಗಳನ್ನು ಈ ವಾಕ್ಯ ಬದಲಾಗಿದೆ. ಐಎಎಸ್ ಅಧಿಕಾರಿ ವ್ಯಾಟ್ಸ್ಆ್ಯಪ್ ಮೂಲಕ ನೀಡಿದ ಈ ಆದೇಶ ಸದನದಲ್ಲಿ ಭಾರಿ ಚರ್ಚೆಯಾಗಿದೆ. ಆದರೆ ಕಾಂಗ್ರೆಸ್ ಈ ಬದಲಾವಣೆಯನ್ನು ಸಮರ್ಥಿಸಿಕೊಂಡಿದೆ. ಪ್ರಬುದ್ಧ ಸಮಾಜ ನಿರ್ಮಾಣ ಮಾಡಲು ಪ್ರಶ್ನಿಸುವುದು ಅಗತ್ಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಮೂಲಕ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು ಎಂಬ ಘೋಷವಾಕ್ಯ ಬದಲಾವಣೆಯನ್ನು ಕಾಂಗ್ರೆಸ್ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಆದರೆ ಬಿಜೆಪಿ ನಾಯಕರು ಕಾಂಗ್ರೆಸ್ ನಡೆಯನ್ನು ಪ್ರಶ್ನಿಸಿದ್ದಾರೆ.