Weekend Curfew: ಜನಾಕ್ರೋಶಕ್ಕೆ ಮಣಿದ ಸರ್ಕಾರ, ವೀಕೆಂಡ್ ಕರ್ಫ್ಯೂ ರದ್ದು,
ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ.
ಬೆಂಗಳೂರು (ಜ. 21): ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ.
ವೀಕೆಂಡ್ ಕರ್ಫ್ಯೂ ಬೇಡ, ವ್ಯಾಪಾರ ವಹಿವಾಟಿಗೆ ಹೊಡೆತ ಬೀಳುತ್ತದೆ, ಈಗಾಗಲೇ ನಷ್ಟದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ, ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ' ಎಂದು ಸರ್ಕಾರದ ಮೇಲೆ ಒತ್ತಡ ಇತ್ತು. ಅದರಂತೆ ಸರ್ಕಾರ ತೆರವುಗೊಳಿಸಿದೆ.
ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂಮತ್ತು ರಾತ್ರಿ ಕರ್ಫ್ಯೂ ಸಡಿಲಿಕೆ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ.