ಜನತಾ ಕರ್ಫ್ಯೂ ಮಧ್ಯೆಯೂ ಮದ್ಯಪ್ರಿಯರಿಗೆ ನೋ ಟೆನ್ಷನ್..!

ಇಂದು ರಾತ್ರಿ 9 ಗಂಟೆಯಿಂದ  14 ದಿನಗಳ ಕಾಲ ತುರ್ತು ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿದೆ. ಆದರೆ, ಈ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಯಾವುದೇ ರೀತಿಯ ಸಾರ್ವಜನಿಕ ಸಾರಿಗೆ ವಾಹನ ವ್ಯವಸ್ಥೆ ಇರುವುದಿಲ್ಲ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 27): ಇಂದು ರಾತ್ರಿ 9 ಗಂಟೆಯಿಂದ 14 ದಿನಗಳ ಕಾಲ ತುರ್ತು ಸೇವೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಳ್ಳಲಿದೆ. ಆದರೆ, ಈ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಯಾವುದೇ ರೀತಿಯ ಸಾರ್ವಜನಿಕ ಸಾರಿಗೆ ವಾಹನ ವ್ಯವಸ್ಥೆ ಇರುವುದಿಲ್ಲ. ಜನರು ತಮ್ಮ ಸ್ವಂತ ವಾಹನಗಳಲ್ಲಿಯೂ ಅನಿವಾರ್ಯ ಕಾರಣ ಹೊರತುಪಡಿಸಿ ಅನಗತ್ಯವಾಗಿ ಸಂಚರಿಸುವಂತಿಲ್ಲ.

ಮದುವೆಗೆ ಬಂದವರ ಮೂಗಿಗೆ ನಿಂಬೆರಸ, ಉಸಿರಾಟದ ಸಮಸ್ಯೆಗೆ ರಾಮಬಾಣ..!

ಗೂಡ್ಸ್‌ ವಾಹನಗಳ ಓಡಾಟಕ್ಕೆ ಯಾವುದೇ ಸಮಸ್ಯೆ ಇರುವುದಿಲ್ಲ. ಹಣ್ಣು, ತರಕಾರಿ ಸೇರಿದಂತೆ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಅವಕಾಶ ನೀಡಲಾಗಿದೆ. ಅಂತಾರಾಜ್ಯ ಗೂಡ್ಸ್‌ ವಾಹನಗಳ ಸಂಚಾರ ಇರಲಿದೆ. ಪ್ರತಿನಿತ್ಯ ಬೆಳಗ್ಗೆ 6 ಗಂಟೆಯಿಂದ 10ರವರೆಗೆ ಕೇವಲ 4 ಗಂಟೆಗಳ ಕಾಲ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. 

Related Video